ಅಪರಾಧ ಸುದ್ದಿ

ವೇಶ್ಯಾವಾಟಿಕೆ ನಡೆಸುತ್ತಿದ್ದ ಸ್ಪಾ ಸೆಂಟರ್ ಮೇಲೆ ದಾಳಿ 6 ಮಹಿಳೆಯರ ರಕ್ಷಣೆ : ಓರ್ವ ವಶಕ್ಕೆ

Share It

ಬೆಳಗಾವಿ : ವೇಶ್ಯಾವಾಟಿಕೆ ನಡೆಸುತ್ತಿದ್ದ ಸ್ಪಾ ಮತ್ತು ಬ್ಯೂಟಿ ಪಾರ್ಲರ್ ಸೆಂಟರ್ ಒಂದರ ಮೇಲೆ ದಾಳಿ ಮಾಡಿರುವ ಬೆಳಗಾವಿಯ ಸಿಇಎನ್ ಪೊಲೀಸರು 6 ಮಹಿಳೆಯರನ್ನು ರಕ್ಷಣೆ ಮಾಡುವ ಮೂಲಕ ಮಾಲಿಕಳನ್ನು ವಶಕ್ಕೆ ಪಡೆದಿರುವ ಘಟನೆ ಗುರುವಾರ ಬೆಳಗಾವಿಯಲ್ಲಿ ನಡೆದಿದೆ.

ಬೆಳಗಾವಿಯ ಅನಗೋಳ ಮುಖ್ಯ ರಸ್ತೆಯಲ್ಲಿ ಇರುವ ಅಂಜಲಿ ಸ್ಪಾ ಮತ್ತು ಬ್ಯೂಟಿ ಪಾರ್ಲರ್ ಮೇಲೆ ಈ ದಾಳಿಯನ್ನು ನಡೆಸಲಾಗಿದೆ. ಖಚಿತ ಮಾಹಿತಿ ಮೇರೆಗೆ ನಗರ ಪೊಲೀಸ್ ಆಯುಕ್ತ ಹಾಗೂ ಉಪ ಆಯುಕ್ತರ ಮಾರ್ಗದರ್ಶನದಂತೆ ಬೆಳಗಾವಿಯ ಸಿಇಎನ್ ಪೊಲೀಸ್ ಠಾಣೆಯ ಪಿಐ ಬಿ.ಆರ್. ಗಡ್ಡೇಕರ್ ಅವರ ನೇತೃತ್ವದಲ್ಲಿ ಈ ದಾಳಿ ನಡೆದಿದೆ.

ಈ ದಾಳಿ ವೇಳೆ ವೇಶ್ಯಾವಾಟಿಕೆಯಲ್ಲಿ ತೊಡಗಿದ್ದ 6 ಮಹಿಳೆಯರನ್ನು ರಕ್ಷಣೆ ಮಾಡಲಾಗಿದೆ. ಈ ವೇಶ್ಯಾವಾಟಿಕೆ ಚಟುವಟಿಕೆಯಲ್ಲಿ ಜಿಲ್ಲೆಯ ಸಂಕೇಶ್ವರ ಪಟ್ಟಣ ಹಾಗೂ ಕಾಕತಿಯ ಮಹಿಳೆ ಸೇರಿ ಅನಗೋಳದ ನಾಲ್ವರನ್ನು ಪೊಲೀಸರು ರಕ್ಷಣೆ ಮಾಡಿದ್ದಾರೆ.

ಅಲ್ಲದೆ ಸ್ಪಾ ಮತ್ತು ಬ್ಯೂಟಿ ಪಾರ್ಲರ್ ಮಾಲಿಕಿಯಾದ ಅಂಜಲಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.


Share It

You cannot copy content of this page