KAS ಅಭ್ಯರ್ಥಿಗಳಿಗೆ ಗುಡ್ ನ್ಯೂಸ್ ನೀಡಿದ ಸರಕಾರ: 20 ದಿನಗಳಲ್ಲಿ ನೇಮಕ ಪ್ರಕ್ರಿಯೆ
ಬೆಳಗಾವಿ: 2023-24ನೇ ಸಾಲಿನ 384 ಗೆಜೆಟೆಡ್ ಪ್ರೊಬೆಷನರ್ಸ್ ಹುದ್ದೆಗಳ ನೇಮಕಾತಿಗಾಗಿ ಕರ್ನಾಟಕ ಲೋಕಸೇವಾ ಆಯೋಗವು 2025ರ ಮೇ 3 ರಿಂದ 2025ರ ಮೇ 9ರ ವರೆಗೆ ಮುಖ್ಯ ಪರೀಕ್ಷೆ ನಡೆಸಿದ್ದು, ಪರೀಕ್ಷೋತ್ತರ ಕಾರ್ಯಗಳ ಪ್ರಕ್ರಿಯೆಯು ಪ್ರಗತಿಯಲ್ಲಿದೆ. 20 ದಿನದಲ್ಲಿ ಪೂರ್ಣಗೊಳ್ಳಲಿದೆ.
ಕೆಎಎಸ್ ಪೂರ್ವಭಾವಿ ಪರೀಕ್ಷೆ ಬರೆದು ಪಾಸಾದ ಪರೀಕ್ಷೆಯ ಅಭ್ಯರ್ಥಿಗಳ ಮುಖ್ಯ ಪರೀಕ್ಷೆಯ ಫಲಿತಾಂಶವನ್ನು ಕರ್ನಾಟಕ ಗೆಜೆಟೆಡ್ ಪ್ರೊಬೆಷನರ್ಸ್ (ಸ್ಪರ್ಧಾತ್ಮಕ ಪರೀಕ್ಷೆಗಳ ಮೂಲಕ ನೇಮಕಾತಿ) ನಿಯಮಗಳು 1997 ಹಾಗೂ ತಿದ್ದುಪಡಿ ನಿಯಮಗಳನ್ವಯ ಪ್ರಕಟಿಸಲಾಗುತ್ತದೆ ಎಂದು ವಿಧಾನಸಭಾ ಕಲಾಪದಲ್ಲಿ ಮುಖ್ಯಮಂತ್ರಿಗಳ ಪರವಾಗಿ ಸಣ್ಣ ನೀರಾವರಿ ಸಚಿವರಾದ ಎನ್.ಎಸ್.ಭೋಸರಾಜು ಅವರ ಉತ್ತರ ನೀಡಿದ್ದಾರೆ.


