ಬೆಂಗಳೂರು: ಅಯೋಧ್ಯೆ ರಾಮಮಂದಿರದ ಮೂಲವಿಗ್ರಹ ಮೂರ್ತಿ ರಾಮಲಲ್ಲಾದ ಶಿಲ್ಪಿ ಅರುಣ್ ಯೋಗಿರಾಜ್ ಅವರಿಗೆ ಅಮೆರಿಕ ವೀಸಾ ನಿರಾಕರಿಸುವ ಮೂಲಕ ವಿವಾದ ಹುಟ್ಟುಹಾಕಿದೆ.
ಅಕ್ಕ ಸಮ್ಮೇಳನದಲ್ಲಿ ಭಾಗವಹಿಸಲು ಅವರು 20 ದಿನಗಳ ಕಾಲ ಅಮೆರಿಕ ಪ್ರವಾಸ ಕೈಗೊಳ್ಳಲು ತೀರ್ಮಾನಿಸಿದ್ದರು. ಹೀಗಾಗಿ, ಜೂನ್ ನಲ್ಲಿ ವೀಸಾಗೆ ಅರ್ಜಿ ಸಲ್ಲಿಸಿದ್ದರು. ಆದರೆ, ನಿಬಂಧನೆಗಳನ್ನು ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ವೀಸಾ ನಿರಾಕರಿಸಲಾಗಿದೆ.
ಅಮೆರಿಕದ ಕನ್ನಡ ಒಕ್ಕೂಟಗಳ ಸಂಘ ನಡೆಸುವ ವಿಶ್ವಕನ್ನಡ ಸಮ್ಮೇಳನದಲ್ಲಿ ಭಾಗವಹಿಸಲು ಯೋಗೀರಾಜ್ ಮತ್ತು ಕುಟುಂಬಕ್ಕೆ ಆಹ್ವಾನ ನೀಡಲಾಗಿತ್ತು. ಕಾರ್ಯಕ್ರಮ ವರ್ಜೀನಿಯಾ ದ ರಿಚ್ಮಂಡ್ ನಲ್ಲಿ ಆಯೋಜನೆಯಾಗಿತ್ತು. ಆದರೆ, ವೀಸಾ ತಿರಸ್ಕಾರವಾಗಿದ್ದು, ಅಮೆರಿಕ ರಾಯಭಾರ ಕಚೇರಿ ಯಾವುದೇ ಕಾರಣ ನೀಡಿಲ್ಲ.
Updating…