ಅಪರಾಧ ರಾಜಕೀಯ ಸುದ್ದಿ

ಮುಸ್ಲಿಮರ ವಿರುದ್ಧ ಹೇಳಿಕೆ ಆರೋಪ: ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್ಐಆರ್

Share It

ಮೈಸೂರು: ಮುಸ್ಲಿಮರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಕ್ಕಾಗಿ ಬಿಜೆಪಿಯ ಮುಖಂಡ ಹಾಗೂ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಮೈಸೂರಿನಲ್ಲಿ ಎಫ್ ಐಆರ್ ದಾಖಲಾಗಿದೆ.

ಉದಯಗಿರಿ ಪೊಲೀಸ್ ಠಾಣೆಯಲ್ಲಿ ದಾಂಧಲೆ ಪ್ರಕರಣಕ್ಕೆ ಸಂಬಂಧಿಸಿ ಮುಸ್ಲಿಮರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಬಿಜೆಪಿ ಮಾಜಿ ಸಂಸದ ಪ್ರತಾಪ್‌ ಸಿಂಹ ವಿರುದ್ಧ ಉದಯಗಿರಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.

ಮೈಸೂರು ಯುವ ಕಾಂಗ್ರೆಸ್‌ ಮುಖಂಡ ಸೈಯದ್‌ ಅಬ್ರರ್ ನೀಡಿದ ದೂರಿನ ಅನ್ವಯ ಪ್ರತಾಪ್ ಸಿಂಹ ವಿರುದ್ಧ ಎಫ್ ಐಆರ್ ದಾಖಲಾಗಿದೆ.

ಮೈಸೂರು ಉದಯಗಿರಿ ಪೊಲೀಸ್‌ ಠಾಣೆ ಮೇಲೆ ಫೆ.10ರಂದು ನಡೆದ ದಾಂಧಲೆ ಪ್ರಕರಣಕ್ಕೆ ಸಂಬಂಧಿಸಿ ಪ್ರತಾಪ್ ಸಿಂಹ ಮಾಧ್ಯಮಗಳ ಮುಂದೆ ಅವಹೇಳನಕಾರಿ ಹೇಳಿಕೆ ನೀಡಿದ್ದರು.


Share It

You cannot copy content of this page