ಬೆಂಗಳೂರು: ಚಿತ್ರದುರ್ಗ ಬಸ್ ಅಪಘಾತ ಪ್ರಕರಣದಲ್ಲಿ ಟ್ರಕ್ ಚಾಲಕನ ಪಾತ್ರವಿರುವುದು ಗೊತ್ತಾಗಿದ್ದು, ಡ್ರಕ್ ಡಿವೈಡರ್ ನುಗ್ಗಿ ಬಸ್ ನ ಡೀಸೆಲ್ ಟ್ಯಾಂಕ್ ಗೆ ಡಿಕ್ಕಿ ಹೊಡೆದಿದ್ದೇ ಬೆಂಕಿ ಅನಾಹುತಕ್ಕೆ ಕಾರಣ ಎನ್ನಲಾಗಿದೆ.
ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಸ್ ಚಾಲಕನ ಹೇಳಿಕೆ ಪ್ರಕಾರ, ಎದುರಿನಿಂದ ಬಂದ ಟ್ರಕ್, ಪಕ್ಕದ ರಸ್ತೆಯಿಂದ ಡಿವೈಡರ್ ದಾಟಿ ಬಸ್ ಗೆ ಡಿಕ್ಕಿ ಹೊಡೆದಿದೆ. ಈ ವೇಳೆ ಟ್ರಕ್ ಬಸ್ ನ ಡೀಸೆಲ್ ಟ್ಯಾಂಗ್ ಗೆ ಗುದ್ದಿದೆ. ಇದರಿಂದಾಗಿಯೇ ಬಸ್ಸಿನಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಹೊತ್ತಿಕೊಂಡಿದೆ ಎನ್ನಲಾಗಿದೆ.
ಘಟನೆಯಲ್ಲಿ ಟ್ರಕ್ ಚಾಲಕ ಸಾವನ್ನಪ್ಪಿದ್ದು, ಬಸ್ ಚಾಲಕ ಹಾಗೂ ನಿರ್ವಾಹಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬಸ್ ನಲ್ಲಿದ್ದ ಎಂಟು ಜನರು ಸಾವನ್ನಪ್ಪಿದ್ದು, ಟ್ರಕ್ ಚಾಲಕ ಸೇರಿ ಒಂಬತ್ತು ಮಂದಿ ಮೃತಪಟ್ಟಿದ್ದಾರೆ ಎನ್ನಲಾಗಿದೆ.

