ಕೇರ್ ಟೇಕರ್ ಹೆಸರಲ್ಲಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳ್ಳತನ: ಯುವತಿ ಅರೆಸ್ಟ್

police bedi
Share It

ಬೆಂಗಳೂರು: ಅನಾರೋಗ್ಯ ಪೀಡಿತರು ಹಾಗೂ ವಯೋವೃದ್ಧರನ್ನು ಕೇರ್ ಟೇಕ್ ಮಾಡುವ ನೆಪದಲ್ಲಿ ಮಾಲೀಕರ ಮನೆಯಲ್ಲಿ ಕಳ್ಳತನ ಮಾಡುತ್ತಿದ್ದ ಯುವತಿಯರನ್ನು ಬೈಯ್ಯಪ್ಪನಹಳ್ಳಿ ಪೊಲೀಸರು ಬಂಧಿಸಿದ್ದಾರೆ.

ಸೋನಿಯಾ (29) ಎಂಬ ಆರೋಪಿ ಯುವತಿಯಿಂದ ಸುಮಾರು 11.50 ಲಕ್ಷ ಮೌಲ್ಯದ 157 ಗ್ರಾಂ ಚಿನ್ನಾಭರಣ ವಶಕ್ಕೆ ಪಡೆದಿರುವ ಪೊಲೀಸರು, ಆಕೆಯನ್ನು ವಿಚಾರಣೆಗೊಳಪಡಿಸಿದ್ದಾರೆ.

ಆಂಧ್ರಪ್ರದೇಶ ಮೂಲದ ಆರೋಪಿ ಸೋನಿಯಾ, ಹಲವು ವರ್ಷಗಳಿಂದ ನಗರದಲ್ಲಿ ನೆಲಸಿದ್ದು, ಬೈಯ್ಯಪ್ಪನಹಳ್ಳಿ ವ್ಯಾಪ್ತಿಯ ಭುವನೇಶ್ವರಿ ನಗರದ ಮನೆಯೊಂದರಲ್ಲಿ ಕೆಲಸಕ್ಕೆ ಸೇರಿದ್ದು, ಅನಾರೋಗ್ಯ ಕಾರಣ‌ ನೀಡಿ ಕೆಲಸ ತೊರೆದಿದ್ದಳು. ಆದರೆ, ಆ ಮನೆಯಲ್ಲಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳುವಾಗಿತ್ತು ಎಂಬ ಬಗ್ಗೆ ದೂರು ದಾಖಲಾಗಿತ್ತು.

ಇತ್ತೀಚೆಗೆ ಕೋಣನಕುಂಟೆ ವ್ಯಾಪ್ತಿಯಲ್ಲಿ ಮನೆಯೊಂದರಲ್ಲಿ ಕೆಲಸಕ್ಕೆ ಸೇರಿದ್ದ ಸೋನಿಯಾ 15 ದಿನದಲ್ಲಿ 108 ಚಿನ್ನಾಭರಣ ಕದ್ದು ಪರಾರಿಯಾಗಿದ್ದಳು. ಕೋಣನಕುಂಟೆ ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದರು. ಮತ್ತೊಂದೆಡೆ ಬೈಯ್ಯಪ್ಪನಹಳ್ಳಿ ಪೊಲೀಸರು ಆಕೆಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಆಕೆಯ ಕೃತ್ಯ ಬೆಳಕಿಗೆ ಬಂದಿದೆ.

ಆರೋಪಿ ಸುಮಾರು 157 ಗ್ರಾಂ ತೂಕದ ಚಿನ್ನಾಭರಣಗಳನ್ನು ಕದ್ದು, ನಾಗವಾರ ಪಾಳ್ಯ ಹಾಗೂ ಜೆ.ಪಿ ನಗರದ ಗಿರವಿ ಅಂಗಡಿಗಳಲ್ಲಿ ಅಡವಿಟ್ಟಿದ್ದಳು ಎನ್ನಲಾಗಿದೆ. ಆರೋಪಿ ವಿರುದ್ಧ ಎರಡು ಕಳ್ಳತನ ಪ್ರಕರಣ ದಾಖಲಿಸಿರುವ ಪೊಲೀಸರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.


Share It

You cannot copy content of this page