ಉಪಯುಕ್ತ ರಾಜಕೀಯ ಸುದ್ದಿ

ಮೆಟ್ರೋ ಪ್ರಯಾಣ ದರ ಇಳಿಕೆ; ಮಹತ್ವದ ಮಾಹಿತಿ ಕೊಟ್ಟ ಡಿಸಿಎಂ ಡಿ.ಕೆ. ಶಿ

Share It

ಬೆಂಗಳೂರು: “ಮೆಟ್ರೋ ದರ ಇಳಿಸಬೇಕು ಎಂದು ನಮ್ಮ ಸರ್ಕಾರ ಅಭಿಪ್ರಾಯವನ್ನು ಬಿಎಂಆರ್ ಸಿಎಲ್ ಗೆ ತಿಳಿಸಿದ್ದು, ಅಂತಿಮ ತೀರ್ಮಾನ ಕೇಂದ್ರ ಸಮಿತಿಯದ್ದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ವಿಧಾನಸೌಧ ಆವರಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಗುರುವಾರ ಪ್ರತಿಕ್ರಿಯಿಸಿದರು.

ಬಿಎಂಆರ್ ಸಿಎಲ್ ಮೆಟ್ರೋ ಟಿಕೆಟ್ ದರ ಕಡಿಮೆ ಮಾಡಲು ಮುಂದಾಗಿರುವ ಬಗ್ಗೆ ಕೇಳಿದಾಗ, “ನಮಗೂ ಅದಕ್ಕೂ ಸಂಬಂಧವಿಲ್ಲ. ಈ ವಿಚಾರ ರಾಜ್ಯ ಸರ್ಕಾರದ ಸುಪರ್ದಿಗೆ ಬರಲ್ಲ, ಇದಕ್ಕಾಗಿಯೇ ಕೇಂದ್ರ ಸಮಿತಿ ರಚಿಸಲಾಗಿದೆ. ಜನರ ಮನವಿ ಆಲಿಸಿ ಮುಖ್ಯಮಂತ್ರಿಗಳು ಮೆಟ್ರೋ ದರ ಇಳಿಸುವ ಬಗ್ಗೆ ಅಭಿಪ್ರಾಯ ತಿಳಿಸಿದ್ದಾರೆ.

ಜನಸಾಮಾನ್ಯರು ಹಾಗೂ ಮೆಟ್ರೋ ಹಿತಾಸಕ್ತಿ ಕಾಯಲು ಯಾವ ನಿರ್ಧಾರ ಮಾಡುತ್ತಾರೋ ಮಾಡಲಿ. ಈ ದರ ನಿಗದಿಗೆ ನ್ಯಾಯಾಧೀಶರ ನೇತೃತ್ವದ ಪ್ರತ್ಯೇಕ ಕೇಂದ್ರ ಸಮಿತಿ ಮಾಡಲಾಗಿದೆ. ಆ ಸಮಿತಿಗೆ ನಾವು ನಮ್ಮ ಅಭಿಪ್ರಾಯ ತಿಳಿಸುತ್ತೇವೆ, ಅಂತಿಮ ನಿರ್ಧಾರ ಅವರದು” ಎಂದು ತಿಳಿಸಿದರು.


Share It

You cannot copy content of this page