ಬೆಂಗಳೂರು: ಗಣೇಶ ಹಬ್ಬದ ಪ್ರಯುಕ್ತ ಬೇರೆ ಊರುಗಳಿಗೆ ತೆರಳುವ ಪ್ರಯಾಣಿಕರಿಗೆ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಟಿಕೆಟ್‌ನಲ್ಲಿ ಶೇ.೫ರಷ್ಟು ರಿಯಾಯಿತಿ ನೀಡಿದೆ.
ಬೆಂಗಳೂರು, ಪುಣೆ, ಹೈದರಾಬಾದ್‌ನಿಂದ ಹುಬ್ಬಳ್ಳಿ, ಧಾರವಾಡ, ಗದಗ, ಬೆಳಗಾವಿ, ಚಿಕ್ಕೋಡಿ, ಉತ್ತರ ಕನ್ನಡ, ಹಾವೇರಿ, ಬಾಗಲಕೋಟೆ ಜಿಲ್ಲೆಗಳಿಗೆ ವಿಶೇಷ ಬಸ್ ಬಿಡಲಾಗಿದೆ.
ಗಣೇಶ ಹಬ್ಬದ ಸಂದರ್ಭದಲ್ಲಿ ನಾಲ್ಕು ಅಥವಾ ನಾಲ್ಕಕ್ಕಿಂತ ಹೆಚ್ಚಿನ ಆಸನಗಳನ್ನು ಒಂದೇ ಸಲಕ್ಕೆ ಕಾಯ್ದಿರಿಸಿರಿದರೇ ಶೇ.5 ರಷ್ಟು ರಿಯಾತಿ ನೀಡಲಾಗಿದೆ.