ಕ್ರೀಡೆ ಸುದ್ದಿ

ಬಾಂಗ್ಲಾ ವಿರುದ್ಧದ ಟೆಸ್ಟ್ ಸರಣಿಗೆ ಯಾರಿಗೆಲ್ಲ ಸ್ಥಾನ ಸಿಗಬಹುದು?

Share It

ಹೊಸದಿಲ್ಲಿ: ಬರೋಬ್ಬರಿ ಆರು ತಿಂಗಳ ಬಳಿಕ ಟೀಮ್ ಇಂಡಿಯಾದ ಆಟಗಾರರು ರೆಡ್ ಬಾಲ್ ಹಿಡಿದು ವೈಟ್ ಜೆರ್ಸಿ ತೊಟ್ಟು ಬಾಂಗ್ಲಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಟೀಮ್ ಇಂಡಿಯಾ ಮಾರ್ಚ್ ನಲ್ಲಿ ಕೊನೆಯದಾಗಿ ಇಂಗ್ಲೆಂಡ್ ವಿರುದ್ಧದ 5 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಆಡಿದ್ದು ಬಿಟ್ಟರೆ ಇದೀಗ ಆರು ತಿಂಗಳ ಬಳಿಕ ಬಾಂಗ್ಲಾ ವಿರುದ್ಧ ಆಡಲಿದೆ.

ಸೆಪ್ಟೆಂಬರ್ 19 ರಿಂದ್ ಶುರುವಾಗುತ್ತಿರುವ ಬಾಂಗ್ಲಾ ವಿರುದ್ಧದ ಎರಡು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಮೊದಲ ಪಂದ್ಯ  ಚೆನ್ನೈನ ಚಿದಂಬರಂ ಕ್ರೀಡಾಂಗಣದಲ್ಲಿ ನೆಡೆಯಲಿದೆ.

ದುಲೀಪ್ ಟ್ರೋಫಿಯಲ್ಲಿ ಉತ್ತಮ ಪ್ರದರ್ಶನ ನೀಡಿದವರರಿಗೆ ಈ ಸರಣಿಯಲ್ಲಿ ಆಟವಾಡಲು ಅವಕಾಶ ಕಲ್ಪಿಸಿಕೊಡುವುದು ಬಹುತೇಕ ಖಚಿತವಾಗಿದೆ. ಕೋಚ್ ಗೌತಮ್ ಗಂಭೀರ್ ಅವರ ನೇತೃತ್ವದಲ್ಲಿ ನೆಡೆಯುತ್ತಿರುವ ಮೊದಲ ಟೆಸ್ಟ್ ಮ್ಯಾಚ್ ಇದಾಗಿದ್ದು. ಟೆಸ್ಟ್ ಚಾಂಪಿಯನ್ ಶಿಪ್ ನ ಪಾಯಿಂಟ್ಸ್ ಟೇಬಲ್ ನಲ್ಲಿ ಮೊದಲ ಸ್ಥಾನದಲ್ಲಿಯೇ ಉಳಿಯಬೇಕೆಂದರೆ ಈ ಸರಣಿ ಗೆಲ್ಲುವುದು ಟೀಮ್ ಇಂಡಿಯಾಗೆ ಅತ್ಯವಶ್ಯಕವಾಗಿದೆ.

ಇನ್ನು ಈ ಸರಣಿಗೆ ಯಾರೆಲ್ಲ ಇರಬಹುದು ಎಂದು ನೋಡುವುದಾದರೆ. ರೋಹಿತ್ ಶರ್ಮ ನಾಯಕತ್ವದಲ್ಲಿ ಶುಭ್ಮನ್ ಗಿಲ್ಲ ಉಪನಾಯಕನಾಗಿ ಆಡುವುದು ಬಹುತೇಕ ಖಚಿತವಾಗಿದೆ. ಇನ್ನು ಬರೋಬ್ಬರಿ ಎಂಟು ತಿಂಗಳ ಬಳಿಕ ವಿರಾಟ್ ಕೊಹ್ಲಿ ಟೆಸ್ಟ್ ಪಂದ್ಯದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಇನ್ನು ಕಾರ್ ಅಪಘಾತದಿಂದ ಚೇತರಿಸಿಕೊಂಡಿರುವ ರಿಷಬ್ ಪಂತ್, ಜೊತೆಗೆ ದೃವ್ ಜೂರೆಲ್ ವಿಕೆಟ್ ಕೀಪಿಂಗ್ ವಿಭಾಗದಲ್ಲಿ ಕಾಣಿಸಿಕೊಳ್ಳುವುದು ಖಚಿತ ಎನ್ನಲಾಗುತ್ತಿದೆ. ಆಲ್ ರೌಂಡಿಂಗ್ ವಿಭಾಗದಲ್ಲಿ ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ ಜೊತೆಗೆ ಅಕ್ಸರ್ ಪಟೇಲ್ ಆಡಲಿದ್ದಾರೆ.

ಸಾರ್ಫಾರಾಜ್ ಖಾನ್ ಮತ್ತು ದೇವದತ್ ಪಡಿಕ್ಕಲ್ ದೇಸಿ ಟೂರ್ನಿಗಳಲ್ಲಿ ಉತ್ತಮ ಪ್ರದರ್ಶನ ತೋರಿರುವ ಹಿನ್ನಲೆಯಲ್ಲಿ ಸರಣಿಯಲ್ಲಿ ಇವರೂ ಕೂಡ ಸ್ಥಾನ ಗಿಟ್ಟಸಿಕೊಳ್ಳಬಹುದು ಎನ್ನಲಾಗುತ್ತಿದೆ. ಇನ್ನು ಕನ್ನಡಗ ಕೆ. ಎಲ್. ರಾಹುಲ್ ಗೆ ಸ್ಥಾನ ಸಿಗುವುದು ಅನುಮಾನ ಎನ್ನಲಾಗುತ್ತಿದೆ.

ಟೀಮ್ ಇಂಡಿಯಾದ ಬೌಲಿಂಗ್ ವಿಭಾಗದಲ್ಲಿ ಯಾರೆಲ್ಲ ಕಾಣಿಸಿಕೊಳ್ಳಲಿದ್ದಾರೆ ಎಂದು ನೋಡುವುದಾದರೆ ಬುಮ್ರ, ಶಮಿಗೆ ವಿಶ್ರಾಂತಿ ನೀಡಿರುವುದರಿಂದ ವೇಗಿ ಮಹಮದ್ ಸಿರಾಜ್ ಬೌಲಿಂಗ್ ವಿಭಾಗವನ್ನು ಮುನ್ನೆಡೆಸಲಿದ್ದಾರೆ. ಜೊತೆಗೆ ಆರ್ಷದೀಪ್ ಸಿಂಗ್, ಮುಕೇಶ್ ಕುಮಾರ್, ಕುಲ್ದೀಪ್ ಯಾದವ್, ಆಕಾಶ್ ದೀಪ್ ಆಡಲಿದ್ದಾರೆ.


Share It

You cannot copy content of this page