ಪ್ಯಾರಿಸ್: ಪ್ಯಾರಾಲಿಂಪಿಕ್ಸ್ನ ಜಾವೆಲಿನ್ ಥ್ರೋ ಎಫ್41 ಸ್ಪರ್ಧೆಯಲ್ಲಿ ಭಾರತದ ನವದೀಪ್ ಸಿಂಗ್ ಚಿನ್ನದ ಪದಕ ಗೆದ್ದಿದ್ದಾರೆ.
47.32 ಮೀಟರ್ ದೂರಕ್ಕೆ ಜಾವೆಲಿನ್ ಎಸೆಯುವ ಮೂಲಕ ನವದೀಪ್ ಪ್ಯಾರಾಲಿಂಪಿಕ್ಸ್ನಲ್ಲಿ ಹೊಸ ದಾಖಲೆ ಬರೆದಿದ್ದಾರೆ.
ಸ್ಪರ್ಧೆ ಆರಂಭದಲ್ಲಿ ನವದೀಪ್ ಬೆಳ್ಳಿ ಪದಕ ಗೆದ್ದಿದ್ದರು. ಆದರೆ ಇರಾನ್‌ನ ಬೀಟ್ ಸಡೆಗ್ ಕ್ರೀಡಾಹೀನ ನಡವಳಿಕೆಗಾಗಿ ಅನರ್ಹಗೊಂಡ ನಂತರ ನವದೀಪ್ ಅವರನ್ನು ಚಿನ್ನ ಪದಕಕ್ಕೆ ಅಪ್‌ಗ್ರೇಡ್ ಮಾಡಲಾಯಿತು. ಈ ಮೂಲಕ ನವದೀಪ್ ಸಿಂಗ್ ಭಾರತಕ್ಕೆ 7ನೇ ಚಿನ್ನದ ಪದಕ ತಂದುಕೊಟ್ಟರು.
ಟೋಕಿಯೊ 2021 ಪ್ಯಾರಾಲಿಂಪಿಕ್ಸ್ನಲ್ಲಿ ಚೀನಾದ ಪೆಂಗ್‌ಕ್ಸಿಯಾಂಗ್ ಸನ್ 47.13m ದೂರಕ್ಕೆ ಜಾವೆಲಿನ್ ಎಸೆದಿದ್ದು ಈವರೆಗಿನ ದಾಖಲೆಯಾಗಿತ್ತು. ಇದೀಗ ನವದೀಪ್ ಸಿಂಗ್ 47,32 ಮೀಟರ್ ದೂರಕ್ಕೆ ಎಸೆಯುವ ಮೂಲಕ ಹೊಸ ಇತಿಹಾಸ ನಿರ್ಮಿಸಿದ್ದಾರೆ.