ಉಪಯುಕ್ತ ರಾಜಕೀಯ ಸುದ್ದಿ

ಎತ್ತಿನಹೊಳೆ ಯೋಜನೆಯ ಮೊದಲ ಹಂತದ ನೀರು ಪೂರೈಕೆಗೆ ಸಿಎಂ ಸಿದ್ದರಾಮಯ್ಯ ಚಾಲನೆ

Share It

ಸಕಲೇಶಪುರ: ರಾಜ್ಯದ 7 ಜಿಲ್ಲೆಗಳಿಗೆ ಕುಡಿಯುವ ನೀರೊದಗಿಸುವ ರಾಜ್ಯ ಸರ್ಕಾರ ಮಹತ್ವಾಕಾಂಕ್ಷೆಯ ಎತ್ತನಹೊಳೆ ಯೋಜನೆಯ ಮೊದಲ ಹಂತಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಚಾಲನೆ ನೀಡಿದರು.

ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ದೊಡ್ಡನಗರದ ವಿತರಣಾ ತೊಟ್ಟಿ 3ರಲ್ಲಿ ನೀರೆತ್ತುವ ಪಂಪ್ ಹಾಗೂ ಮೋಟಾರ್​ಗಳನ್ನು ಆನ್​ ಮಾಡುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಲೋಕಾರ್ಪಣೆಗೊಳಿಸಿದರು. ಕಾರ್ಯಕ್ರಮಕ್ಕೂ ಮೊದಲು ಬೆಳಗ್ಗೆ 8.30ರಿಂದ ಉದ್ಘಾಟನಾ ಸ್ಥಳದಲ್ಲಿ ಹೋಮ ಹವನ ನೆರವೇರಿತು.


Share It

You cannot copy content of this page