ಯಾದಗಿರಿ : ಬೈಕ್‌ಗೆ ಸಾರಿಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಮೂವರು ಮೃತಪಟ್ಟಿರುವ ಘಟನೆ ಜಿಲ್ಲೆಯ ಸುರಪುರ ತಾಲೂಕಿನಲ್ಲಿ ನಡೆದಿದೆ.
ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ತಿಂಥಣಿ ಬಳಿ ಅಪಘಾತ ಸಂಭವಿಸಿದ್ದು, ಬೈಕ್‌ನಲ್ಲಿದ್ದ ಒಂದೇ ಕುಟುಂಬದ ಮೂವರು ಮೃತಪಟ್ಟಿದ್ದಾರೆ. ಮತ್ತಿಬ್ಬರ ಸ್ಥಿತಿ ಗಂಭೀರವಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಒಂದೇ ಬೈಕ್‌ನಲ್ಲಿ ಇಬ್ಬರು ಮಕ್ಕಳು ಸೇರಿ ಐವರು ಪ್ರಯಾಣ ಮಾಡುತ್ತಿದ್ದರು ಎನ್ನಲಾಗಿದೆ. ಮಕ್ಕಳು ಸೇರಿ ಮೂವರು ಮೃತಪಟ್ಟಿದ್ದು, ಮತ್ತಿಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಸರಪುರದಿಂದ ತಿಂಥಣಿ ಕಡೆಗೆ ಹೋಗುತ್ತಿದ್ದ ಬೈಕ್‌ಗೆ ಎದುರಿನಿಂದ ಬರುತ್ತಿದ್ದ ಸಾರಿಗೆ ಬಸ್ ಗುದ್ದಿದೆ ಎಂದು ಹೇಳಲಾಗಿದೆ. ಸುರಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಮೃತರ ಗುರುತು ಪತ್ತೆ ಹಚ್ಚು ಕಾರ್ಯದಲ್ಲಿ ತೊಡಗಿದ್ದಾರೆ.