ತುಮಕೂರು: ಸಾಲದ ಭಾದೆಯಿಂದ ಬಳಲುತ್ತಿದ್ದ ರೈತನೊಬ್ಬ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದು, ಆತನ ಸಾವಿಗೆ ಸಾಲದ ಭಾದೆಯೇ ಕಾರಣ ಎನ್ನಲಾಗುತ್ತಿದೆ.
ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಜಿ ಹೊಸಹಳ್ಳಿ ಗ್ರಾಮದಲ್ಲಿ ರೈತನೊಬ್ಬ ಕೆರೆಗೆ ಹಾರಿ ಸಾವನ್ನಪ್ಪಿದ್ದಾನೆ. ಭಾನುವಾರ ಸಂಬAಧಿಕರ ಮನೆಗೆ ಹೋಗುವುದಾಗಿ ಹೇಳಿ ಹೋಗಿದ್ದ ವ್ಯಕ್ತಿ, ವಾಪಸ್ ಬಂದಿರಲಿಲ್ಲ.
ಆದರೆ, ಇಂದು ಕರೆಯಲ್ಲಿ ಶವ ತೇಲುತ್ತಿರುವುದನ್ನು ಕಂಡು ಪರಿಶೀಲನೆ ನಡೆಸಿದಾಗ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಗುಬ್ಬಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.