ರಾಮನಗರ: ರಾಮನಗರ ಪಟ್ಟಣದಲ್ಲಿಯೇ ಕಾಡಾನೆಗಳು ಕಾಣಿಸಿಕೊಂಡಿದ್ದು, ಜನತೆ ಭಯಭೀತಗೊಂಡಿದ್ದಾರೆ. ಬೆಳ್ಳಂಬೆಳಗ್ಗೆ ನಾಲ್ಕು ಆನೆಗಳ ಗುಂಪು ನಗರದಲ್ಲಿ ಕಾಣಿಸಿಕೊಂಡಿದೆ.
ನಗರದ ಎಪಿಸಿಎಂ ಹಿಂಭಾಗದಲ್ಲಿ ನಾಲ್ಕು ಆನೆಗಳ ಹಿಂಡು ಕಾಣಿಸಿಕೊಂಡಿದ್ದು, ಘೀಳಿಡುತ್ತಾ ಓಡಾಡುತ್ತಿವೆ ಎನ್ನಲಾಗಿದೆ. ಇದರಿಂದ ಸಾರ್ವಜನಿಕರು ಭಯಭೀತರಾಗಿದ್ದು, ಆನೆಗಳನ್ನು ಅರಣ್ಯಕ್ಕೆ ಹಿಮ್ಮೆಟಿಸುವಂತೆ ಅರಣ್ಯಾಧಿಗಳಿಗೆ ಸ್ಥಳೀಯರು ಮನವಿ ಮಾಡಿಕೊಂಡಿದ್ದಾರೆ. ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ಪೊಲೀಸರು ಆಗಮಿಸಿದ್ದು, ಕಾರ್ಯಾಚರಣೆಗೆ ಸಿದ್ಧತೆ ನಡೆಸುತ್ತಿದ್ದಾರೆ.
ಸಧ್ಯ ಆನೆಗಳು ರಾಮನಗರದ ರಂಗನಾರಾಯಣ ಕೆರೆಯ ಪ್ರದೇಶದಲ್ಲಿ ಬೀಡುಬಿಟ್ಟಿದ್ದು, ಆ ಪ್ರದೇಶಕ್ಕೆ ತೆರಳದಂತೆ ಸಾರ್ವಜನಿಕರಿಗೆ ಎಚ್ಚರಿಕೆ ನೀಡಲಾಗುತ್ತಿದೆ. ಆನೆಗಳು ರೊಚ್ಚಿಗೆದ್ದು ಏನಾದರೂ ಅಪಾಯ ಮಾಡುವ ಮುನ್ನ ಅಧಿಕಾರಿಗಳು ಎಚ್ಚೆತ್ತುಕೊಂಡು ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.