ಮಂಡ್ಯ: ಮೈಸೂರು-ಬೆಂಗಳೂರು ಹೆದ್ದಾರಿಯಲ್ಲಿ ಟೈರ್ ಬ್ಲಾಸ್ಟ್ ಆಗಿ ಖಾಸಗಿ ಬಸ್‌ಗೆ ಬೆಂಕಿ ಹೊತ್ತಿಕೊಂಡಿರುವ ಘಟನೆ ಮಂಡ್ಯ ಹೊರವಲಯದಲ್ಲಿ ನಡೆದಿದೆ.
ಬೆಂಗಳೂರಿನಿAದ ಕಣ್ಣೂರಿಗೆ ಹೋಗುತ್ತಿದ್ದ ಬಸ್ ಏಕಾಏಕಿ ಟೈರ್ ಬ್ಲಾಸ್ಟ್ ಆಗಿದೆ. ಈ ವೇಳೆ ಬಸ್‌ನಲ್ಲಿ ಬೆಂಕಿ ಹೊತ್ತಿಕೊಂಡಿದೆ. ಕೂಡಲೇ ಚಾಲಕ ಎಲ್ಲ ಪ್ರಯಾಣಿಕರನ್ನು ಕೆಳಗಿಳಿಸಿದ್ದಾನೆ. ಅನಂತರ ಕ್ಷಣಾರ್ಧದಲ್ಲಿ ಇಡೀ ಬಸ್‌ಗೆ ಬೆಂಕಿ ಹೊತ್ತಿಕೊಂಡಿದೆ ಎನ್ನಲಾಗಿದೆ.
ತಕ್ಷಣವೇ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕಾಗಮಿಸಿದ್ದು, ಬೆಂಕಿ ನಂದಿಸುವ ಕಾರ್ಯ ನಡೆಸಿದ್ದಾರೆ. ಯಾವುದೇ ಪ್ರಯಾಣಿಕರು ತೊಂದರೆಯಿಲ್ಲದೆ ಪಾರಾಗಿದ್ದಾರೆ ಎನ್ನಲಾಗಿದೆ. ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.