ಉಪಯುಕ್ತ ಸುದ್ದಿ

ಮುಂದಿನ 6 ದಿನ ರಾಜ್ಯದಲ್ಲಿ ಭಾರಿ ಮಳೆ!

Share It

ಬೆಂಗಳೂರು : ಪೂರ್ವ ಅರಬ್ಬೀ ಸಮುದ್ರ ತೀರದಲ್ಲಿ ವಾಯುಭಾರ ಕುಸಿತ ಹಿನ್ನೆಲೆ ಮುಂದಿನ 6 ದಿನ ಕರ್ನಾಟಕದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಬಹುತೇಕ ಮಳೆ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಇಂದಿನಿಂದ ಅಕ್ಟೋಬರ್ 16 ರವರೆಗೆ ಮಳೆ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಲಾಗಿದೆ.

ಈ ಬಗ್ಗೆ ಹವಾಮಾನ ಇಲಾಖೆ ತಜ್ಞ ಸಿ.ಎಸ್.ಪಾಟೀಲ್​ ಪ್ರತಿಕ್ರಿಯಿಸಿದ್ದು, ಪೂರ್ವ ಅರಬ್ಬಿ ಸಮುದ್ರ, ಕರ್ನಾಟಕ, ಗೋವಾ, ಕರಾವಳಿ ತೀರದಲ್ಲಿ ತೀವ್ರವಾಗಿ ವಾಯುಭಾರ ಕುಸಿತ ಹಿನ್ನೆಲೆ ಕರ್ನಾಟಕದಲ್ಲಿ ಸಾಮಾಜಿಕ ಅಕ್ಟೋಬರ್​ 11 ರಿಂದ 14 ರವರೆಗೆ ಸಾಧಾರಣ ಮಳೆ ಮತ್ತು 15 ಮತ್ತು 16 ರಂದು ವ್ಯಾಪಕ ಮಳೆ ಆಗಲಿದೆ ಎಂದು ತಿಳಿಸಿದ್ದಾರೆ.

ಬೆಳಗಾವಿ, ಹಾವೇರಿ, ಗದಗ, ಚಿತ್ರದುರ್ಗ, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಧಾರವಾಡ, ಹಾವೇರಿ, ಗದಗ, ದಾವಣಗೆರೆ, ಬಳ್ಳಾರಿ, ರಾಮನಗರ ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ ಇದೆ.

ಯಲ್ಲೋ ಅಲರ್ಟ್ ಘೋಷಣೆ!

ರಾಜ್ಯದ ದಕ್ಷಿಣ ಭಾಗದ ಕೆಲವು ಜಿಲ್ಲೆಗಳಲ್ಲಿ ಅಕ್ಟೊಬರ್ 12 ರಂದು ಭಾರೀ ಮಳೆ ಸಾಧ್ಯತೆ ಇದೆ. ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಬೆಲ್, ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ಹವಾಮಾನ ಇಲಾಖೆ ತಜ್ಞ ಸಿ.ಎಸ್.ಪಾಟೀಲ್ ಹೇಳಿದ್ದಾರೆ.

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ವ್ಯಾಪ್ತಿಯಲ್ಲಿನ ಚಾರ್ಮಾಡಿ ವಾಟ್‌ ರಸ್ತೆಯಲ್ಲಿ ಮಳೆಯಿಂದ ಪ್ರವಾಹದ ಸನ್ನಿವೇಶ ಸೃಷ್ಟಿಯಾಗಿತ್ತು. ರಸ್ತೆ ಮೇಲೆ ಹೊಳೆಯಂತೆ ನೀರು ಹರಿಯುತ್ತಿದ್ದ ದೃಶ್ಯ ಬೆಚ್ಚಿಬೀಳಿಸುವಂತಿತ್ತು. ಸಾಲು ಸಾಲಾಗಿ ಗುಡ್ಡಗಳು ಕುಸಿದಿದ್ದವು. ಟ್ರಾಫಿಕ್ ಜಾಮ್ ಉಂಟಾಗಿ ನೂರಾರು ವಾಹನಗಳು ಸಾಲುಗಟ್ಟಿ ನಿಲ್ಲುವಂತಾಗಿತ್ತು.


Share It

You cannot copy content of this page