ಮೂಡಾ ಸೈಟ್ ಹಿಂದಿರುಗಿಸಲು ಪತ್ನಿ ನಿರ್ಧಾರ : ಸಿಎಂ ಸಿದ್ದು ಅಚ್ಚರಿ ನಡೆ

Share It

ಬೆಂಗಳೂರು: ನನ್ನ ಪತ್ನಿ ನಿವೇಶನಗಳನ್ನು ಹಿಂದಿರುಗಿಸುವ ನಿರ್ಧಾರ ಕೈಗೊಂಡು, ನನಗೂ ಆಶ್ಚರ್ಯ ಉಂಟುಮಾಡಿದ್ದು ನಿವೇಶನಗಳನ್ನು ಹಿಂದಿರುಗಿಸಿದ ನಿರ್ಧಾರವನ್ನು ಗೌರವಿಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.

ಮುಡಾದಿಂದ ಪಡೆದ 14 ನಿವೇಶನಗಳನ್ನು ವಾಪಸ್ ನೀಡುವುದಾಗಿ ಸಿದ್ದರಾಮಯ್ಯರ ಪತ್ನಿ ಬಿ.ಎಂ. ಪಾರ್ವತಿ ಮುಡಾ ಆಯುಕ್ತರಿಗೆ ಪತ್ರ ಬರೆದಿರುವ ಕುರಿತು ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ಸಿಎಂ ಸಿದ್ದರಾಮಯ್ಯ ಮೈಸೂರಿನ ಮುಡಾ ಭೂಸ್ವಾಧೀನ ನಡೆಸದೆ ವಶಕ್ಕೆ ಪಡೆದಿದ್ದ ಜಮೀನಿಗೆ ಪರಿಹಾರ ರೂಪದಲ್ಲಿ ನೀಡಿದ್ದ ನಿವೇಶನಗಳನ್ನು ನನ್ನ ಪತ್ನಿ ಪಾರ್ವತಿ ಹಿಂದಿರುಗಿಸಿದ್ದಾರೆ ಎಂದಿದ್ದಾರೆ.

ನನ್ನ ವಿರುದ್ಧ ನಡೆಯುತ್ತಿರುವ ರಾಜಕೀಯ ಷಡ್ಯಂತ್ರದಿಂದ ನೊಂದಿರುವ ನನ್ನ ಪತ್ನಿ ನಿವೇಶನಗಳನ್ನು ಹಿಂದಿರುಗಿಸುವ ನಿರ್ಧಾರ ಕೈಗೊಂಡಿದ್ದಾರೆ. ವಿರೋಧ ಪಕ್ಷಗಳು ಸುಳ್ಳು ದೂರು ಸೃಷ್ಟಿಸಿ ನನ್ನ ಕುಟುಂಬವನ್ನು ವಿವಾದಕ್ಕೆ ಎಳೆದು ತಂದಿರುವುದು ರಾಜ್ಯದ ಜನತೆಗೂ ತಿಳಿದಿದೆ.

ಈ ಅನ್ಯಾಯಕ್ಕೆ ತಲೆಬಾಗದೆ ಹೋರಾಟ ಮಾಡಬೇಕೆಂಬುದು ನನ್ನ ನಿಲುವಾಗಿತ್ತು. ಆದರೆ ನನ್ನ ವಿರುದ್ಧ ನಡೆಯುತ್ತಿರುವ ರಾಜಕೀಯ ಷಡ್ಯಂತ್ರದಿಂದ ನೊಂದಿರುವ ನನ್ನ ಪತ್ನಿ ಈ ನಿವೇಶನಗಳನ್ನು ಹಿಂದಿರುಗಿಸುವ ನಿರ್ಧಾರ ಕೈಗೊಂಡು, ನನಗೂ ಆಶ್ಚರ್ಯ ಉಂಟು ಮಾಡಿದ್ದಾರೆ.

ನನ್ನ ನಾಲ್ಕು ದಶಕಗಳ ಸುದೀರ್ಘ ರಾಜಕಾರಣದಲ್ಲಿ ಎಂದೂ ಕೂಡಾ ಮಧ್ಯೆಪ್ರವೇಶಿಸದೆ ಕುಟುಂಬಕ್ಕಷ್ಟೆ ಸೀಮಿತವಾಗಿದ್ದ ನನ್ನ ಪತ್ನಿ ನನ್ನ ವಿರುದ್ಧದ ದ್ವೇಷದ ರಾಜಕಾರಣಕ್ಕೆ ಬಲಿಯಾಗಿ ಮಾನಸಿಕವಾಗಿ ಹಿಂಸೆ ಅನುಭವಿಸುವಂತಾಗಿರುವುದಕ್ಕೆ ನನಗೆ ವಿಷಾದ ಇದೆ, ಹೀಗಿದ್ದರೂ ನಿವೇಶನ ಹಿಂದಿರುಗಿಸಿದ ನನ್ನ ಪತ್ನಿ ನಿರ್ಧಾರ ನಾನು ಗೌರವಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ.


Share It

You May Have Missed

You cannot copy content of this page