ದೇಶಾದ್ಯಂತ ಮಾರ್ಚ್ 1 ರಿಂದಲೇ ವಾಣಿಜ್ಯ ಬಳಕೆಯ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆಯಾಗಿದೆ. 19 ಕೆಜಿ ತೂಕದ ವಾಣಿಜ್ಯ ಬಳಕೆಯ ಗ್ಯಾಸ್ ಸಿಲಿಂಡರ್ ಬೆಲೆಯನ್ನು 6 ರೂಪಾಯಿಗೆ ಹೆಚ್ಚಿಸಲಾಗಿದೆ.
ಇಷ್ಟಾದರೂ ಸಹ ಅಡುಗೆ ಗ್ಯಾಸ್ ಸಿಲಿಂಡರ್ ಬೆಲೆ ಯಥಾಸ್ಥಿತಿಯಲ್ಲಿಯೇ ಮುಂದುವರೆದಿದೆ. ಆದಾಗ್ಯೂ ವಾಣಿಜ್ಯ ಬಳಕೆಯ ಗ್ಯಾಸ್ ಸಿಲಿಂಡರ್ ಬೆಲೆ ಹೆಚ್ಚಳವಾದ ಹಿನ್ನೆಲೆಯಲ್ಲಿ ಹೋಟೆಲ್ ತಿಂಡಿ, ತಿನಿಸುಗಳು, ಊಟದ ಬೆಲೆ ಏರಿಕೆಯಾಗುವ ಸಾಧ್ಯತೆ ಇದೆ.