ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಪ್ರಕರಣದಲ್ಲಿ ಬಂಧನದಲ್ಲಿರುವ ಮಾಜಿ ಸಚಿವ ಬಿ.ನಾಗೇಂದ್ರ ಅವರ ನ್ಯಾಯಾಂಗ ಬಂಧನದ ಅವಧಿಯನ್ನು ಆಗಸ್ಟ್ 27 ರವರೆಗೆ ವಿಸ್ತರಿಸಿ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಆದೇಶ ಹೊರಡಿಸಿದೆ.
ಇಷ್ಟಾದರೂ ವಾಲ್ಮೀಕಿ ನಿಗಮದ ಹಗರಣದ ತನಿಖೆ ನಡೆಸುತ್ತಿರುವ ಎಸ್ಐಟಿ ತನಿಖಾ ತಂಡ ಕೋರ್ಟ್ ಗೆ ಸಲ್ಲಿಸಿರುವ ಚಾರ್ಜ್ ಶೀಟ್ ನಲ್ಲಿ ಬಂಧಿತ ಆರೋಪಿ ಮಾಜಿ ಸಚಿವ ಹಾಗೂ ಬಳ್ಳಾರಿ ಕಾಂಗ್ರೆಸ್ ಶಾಸಕ ಬಿ.ನಾಗೇಂದ್ರ ಅವರ ಹೆಸರನ್ನು ನಮೂದಿಸಿಲ್ಲ.
ಈ ಬಗ್ಗೆ ಪ್ರತಿಪಕ್ಷ ಬಿಜೆಪಿ ಪಕ್ಷದ ನಾಯಕರು ಉತ್ತರ ಕರ್ನಾಟಕ ಭಾಗದಲ್ಲಿ ಪಾದಯಾತ್ರೆ ಮೂಲಕ ಜನಾಂದೋಲನ ನಡೆಸಲು ಮುಂದಾಗಿದ್ದಾರೆ.