ಮಹಿಳೆ ಮತ್ತು ಇಬ್ಬರು ಮಕ್ಕಳ ಕೊಲೆಗೆ ಯತ್ನಿಸಿದ ಭಾರತೀಯ ಮೂಲದ ವ್ಯಕ್ತಿ
ಲಂಡನ್ : ಭಾರತೀಯ ಮೂಲದ ವ್ಯಕ್ತಿಯೊಬ್ಬ 2 ವರ್ಷದ ಮಗು ಸೇರಿ ಇಬ್ಬರು ಮಕ್ಕಳು ಹಾಗೂ ಮಹಿಳೆಯನ್ನು ಚಾಕುವಿನಿಂದ ಇರಿದು ಕೊಲ್ಲುವ ಪ್ರಯತ್ನ ನಡೆಸಿದ್ದಾನೆ ಎಂದು ವರದಿಯಾಗಿದೆ.
ಇಂಗ್ಲೇಂಡಿನಲ್ಲಿ ನೆಲೆಸಿರುವ 48 ವರ್ಷದ ಕುಲ್ವೀಂದರ್ ರಾಮ್ ಎಂಬ ವ್ಯಕ್ತಿ, 2 ವರ್ಷದ ಮಗು, 8 ವರ್ಷದ ಬಾಲಕಿ ಹಾಗೂ 30 ವರ್ಷದ ಮಹಿಳೆಯ ಕೊಲೆಗೆ ಯತ್ನಿಸಿರುವ ಆರೋಪ ಕೇಳಿಬಂದಿದೆ. ಡೆಗೆನ್ ಹ್ಯಾಮ್ ನಲ್ಲಿ ಶುಕ್ರವಾರ ಈ ಘಟನೆ ನಡೆದಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.
ಇರಿತಕ್ಕೊಳಗಾದ ಮೂವರನ್ನು ಆಸ್ಪತ್ರೆಗೆ ದಾಖಲು ಮಾಡಿದ್ದು ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ವೈದ್ಯರು ದೃಢಪಡಿಸಿದ್ದಾರೆ. ಇರಿತಕ್ಕೊಳಗಾದವರನ್ನು ಆಸ್ಪತ್ರೆಗೆ ಸೇರಿಸುವಲ್ಲಿ ಸ್ಥಳೀಯರು ವಹಿಸಿದ ಮುಂಜಾಗ್ರತೆ ಮತ್ತು ಕಾಳಜಿಯ ಬಗ್ಗೆ ಪೊಲೀಸರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ ಎಂದು ವರದಿಯಾಗಿದೆ.
ಘಟನೆಯ ಒಂದು ನಂತರ ಆರೋಪಿ ರಾಮ್ ಪೊಲೀಸರ ಮುಂದೆ ಶರಣಾಗಿದ್ದಾನೆ. ಆದರೆ, ಆತ ಮಕ್ಕಳು ಮತ್ತು ಮಹಿಳೆಯನ್ನು ಕೊಲ್ಲುವ ಪ್ರಯತ್ನ ನಡೆಸಿದ್ದು ಯಾಕೆ ಎಂಬ ಬಗ್ಗೆ ಈವರೆಗೆ ಮಾಹಿತಿ ಸಿಕ್ಕಿಲ್ಲ. ಪೊಲೀಸರು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದು, ವಿಚಾರಣೆ ನಂತರವಷ್ಟೇ ಮತ್ತಷ್ಟು ಅಂಶಗಳು ಬೆಳಕಿಗೆ ಬರಬೇಕಿದೆ.


