ಬೆಂಗಳೂರು: ಪ್ರಸಿದ್ಧ ಮೂಳೆ ಆಸ್ಪತ್ರೆಯಲ್ಲಿ ಬೆಂಕಿ ಕಾಣಿಸಿಕೊಂಢಿದ್ದು ಏಳ ಜನರು ಸಾವನ್ನಪ್ಪಿದ್ದು, 20 ಕ್ಕೂ ಹೆಚ್ಚು ಜನರಿಗೆ ಗಂಭೀರವಾಗಿ ಗಾಯವಾಗಿರುವ ಘಟನೆ ತಮಿಳುನಾಡಿನ ದಿಂಡಿಗಲ್ ನಲ್ಲಿ ನಡೆದಿದೆ.
ಪಟ್ಟಣದ ಪ್ರಮುಖ ಮೂಳೆ ಆಸ್ಪತ್ರೆಯಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಅವಘಡ ಸೃಷ್ಟಿಯಾಗಿದೆ. ನೆಲಮಹಡಿಯ ರಿಸೆಪ್ಷನ್ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಕಾಣಿಸಿಕೊಂಡಿದೆ ಎಂದು ಶಂಕಿಸಲಾಗಿದೆ.
ಘಟನೆಯಲ್ಲಿ ಒಂದು ಮಗು ಹಾಗೂ ಇಬ್ಬರು ಮಹಿಳೆಯರು ಸೇರಿದಂತೆ ಏಳು ಜನ ಸಾವನ್ನಪ್ಪಿದ್ದು, 20 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. 30 ಕ್ಕೂ ರೋಗಿಗಳನ್ನು ದಿಂಡಿಗಲ್ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲು ಮಾಡಲಾಗಿದೆ.
ರೋಗಿಗಳ ರಕ್ಷಣಾ ಕಾರ್ಯಾಚರಣೆಗೆ 20 ಅಂಬ್ಯುಲೆನ್ಸ್ ಗಳನ್ನು ಸಜ್ಜುಗೊಳಿಸಲಾಗಿದ್ದು, ಅಗ್ನಿಶಾಮಕ ಸಿಬ್ಬಂದಿ ರಕ್ಷಣಾ ಕಾರ್ಯವನ್ನು ನಡೆಸುತ್ತಿದ್ದಾರೆ. ಪೊಲೀಸರು ಘಟನೆಯ ಕುರಿತು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಆರಂಭಿಸಿದ್ದಾರೆ.