ಸುದ್ದಿ

ಸಿಎಂ ರಿಟ್ ಅರ್ಜಿ ವಿಚಾರಣೆ ಆಗಸ್ಟ್ 29 ಕ್ಕೆ ಮುಂದೂಡಿದ ಹೈಕೋರ್ಟ್

Share It


ಬೆಂಗಳೂರು: ಸಿದ್ದರಾಮಯ್ಯ ಅವರ ಪರವಾಗಿ ಸಲ್ಲಿಸಿದ್ದ ರಿಟ್ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಆಗಸ್ಟ್ 29 ಕ್ಕೆ ಮೂದೂಡಿದೆ.

ರಾಜ್ಯಪಾಲರ ಪ್ರಾಸಿಕ್ಯೂಷನ್ ಆದೇಶಕ್ಕೆ ಮಧ್ಯಂತರ ತಡೆ ನೀಡುವಂತೆ ಕೋರಿ ಸಲ್ಲಿಕೆಯಾಗಿದ್ದ ರಿಟ್ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ನಾಗಪ್ರಸನ್ನ ಅವರಿದ್ಧ ಪೀಠ ನಡೆಸಿತು. ಸಿದ್ದರಾಮಯ್ಯ ಪರ ಅಭಿಷೇಕ್ ಸಿಂಘ್ವಿ ವಾದ ಮಂಡನೆ ಮಾಡಿದರು.

ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅವಕಾಶ ನೀಡಿರುವುದು ಅವಸರದ ತೀರ್ಮಾನ. ನೋಟೀಸ್ ಕೊಡುವ ಮೊದಲು ಅಡ್ವೋಕೇಟ್ ಜನರಲ್ ಅವರ ಅಭಿಪ್ರಾಯ ಪಡೆದಿಲ್ಲ ಎಂದು ವಾದ ಮಂಡಿಸಿದರು‌. ಹೀಗಾಗಿ, ಅರ್ಜಿ ವಿಚಾರಣೆಯನ್ನು ಹತ್ತು ದಿನಗಳ ಕಾಲ ಮುಂದೂಡಬೇಕು ಎಂದು ಮನವಿ ಮಾಡಿದರು.

ವಾಸ ಆಲಿಸಿದ ನ್ಯಾಯಮೂರ್ತಿ, ಪ್ರಕರಣದ ವಿಚಾರಣೆಯನ್ನು ಆಗಸ್ಟ್ 29 ಕ್ಕೆ ಮುಂದೂಡಿಕೆ ಮಾಡಿದರು. ದೂರುದಾರರ ಪರವಾಗಿ ನಾವದಗಿ, ಲಕ್ಷ್ಮೀ ಅಯ್ಯಂಗಾರ್ ವಾದ ಮಂಡನೆ ಮಾಡಿದ್ದರು. ರಾಜ್ಯಪಾಲರ ಪರವಾಗಿ ಉದಯ್ ಮೆಹ್ತಾ ವಾದಿಸಿದರು.


Share It

You cannot copy content of this page