ಬಾಗೇಪಲ್ಲಿ: ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿ, ಅಪಘಾತದಲ್ಲಿ ಬೈಕ್ ಸವಾರ ಸಾವನ್ನಪ್ಪಿದ ಘಟನೆ ಬಾಗೇಪಲ್ಲಿ ತಾಲ್ಲೂಕು ಮಿಟ್ಟೇಮರಿ ಹೋಬಳಿ ಮಿಟ್ಟೇಮರಿ ಬಳಿ ಮಂಗಳವಾರ ಘಟನೆ ನಡೆದಿದೆ.
ಬಾಗೇಪಲ್ಲಿ ಕಡೆಯಿಂದ ಚಿಂತಾಮಣಿ ರಸ್ತೆಗೆ ತರುಳುತ್ತಿದ್ದ ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಮಿಟ್ಟೇಮರಿ ಸಮೀಪ ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆ ಬಳಿ ಅಪಘಾತ ನಡೆದಿದೆ.
ಅಪಘಾತದ ರಭಸಕ್ಕೆ ಬೈಕ್ ಸಂಪೂರ್ಣ ಜಖಂಗೊಂಡಿದೆ.
ಬಸ್ಸಿಗೆ ಅಂಟಿಕೊಂಡಿದೆ.
ಈ ಘಟನೆಯಲ್ಲಿ ಮಿಟ್ಟೇಮರಿಯ ವೆಂಕಟಾಚಲಪತಿಯವರ ಮಗ ರಂಜಿತ ಕುಮಾರ್ (28) ಸ್ಥಳದಲ್ಲೇ ಮೃತ ಪಟ್ಟ ದುರ್ದೈವಿಯಾಗಿದ್ದು, ಘಟನಾ ಸ್ಥಳಕ್ಕೆ ಬಾಗೇಪಲ್ಲಿ ಪಟ್ಟಣದ ಪೊಲೀಸ್ ಠಾಣೆಯ ಸರ್ಕಲ್ ಇನ್ಸ್ ಪೆಕ್ಟರ್ ಪ್ರಶಾಂತ್ ವರ್ಣಿ ಮತ್ತಿತರರು ಭೇಟಿ ನೀಡಿ,ಪರಶೀಲನೆ ನಡೆಸಿ,ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೃತ ದೇಹವನ್ನು ಬಾಗೇಪಲ್ಲಿ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ಇದರಿಂದಾಗಿ ಮೃತರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ವರದಿ
ರಮೇಶ್ ಬಾಬು ಎನ್
ಬಾಗೇಪಲ್ಲಿ ತಾಲ್ಲೂಕು.