ಬೆಂಗಳೂರು: ಮಾಜಿ ಪ್ರಧಾನಿ ಮನಮೋಹನಸಿಂಗ್ ಅವರ ನಿಧನದ ಗೌರವಾರ್ಥ ರಾಜ್ಯದಲ್ಲಿ ಏಳು ದಿನಗಳ ಶೋಕಾಚರಣೆ ಘೋಷಿಸಲಾಗಿದೆ.
ಜೊತೆಗೆ ದಿನಾಂಕ 27.12.2024ರ ಶುಕ್ರವಾರ ಸರ್ಕಾರಿ ರಜೆ ಘೋಷಿಸಲಾಗಿದೆ. ಬೆಳಗಾವಿಯಲ್ಲಿ ಆಯೋಜನೆ ಮಾಡಿದ್ದ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವದ ಎಲ್ಲ ಕಾರ್ಯಕ್ರಮಗಳನ್ನು ರದ್ದು ಮಾಡಲಾಗಿದೆ.
ಏಳು ದಿನಗಳ ಕಾಲ ರಾಜ್ಯದಲ್ಲಿ ಯಾವುದೇ ಅಧಿಕೃತ ಸರಕಾರಿ ಕಾರ್ಯಕ್ರಮಗಳನ್ನು ನಡೆಸದಿರಲು ಸರಕಾರ ತೀರ್ಮಾನಿಸಿದೆ.