ಬೀದರ್: ಮಹಾರಾಷ್ಟ್ರದಲ್ಲಿ ಹಕ್ಕಿ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮಹಾರಾಷ್ಟç ಗಡಿಗೆ ಹೊಂದಿಕೊAಡಿರುವ ರಾಜ್ಯದ ಗಡಿ ಜಿಲ್ಲೆಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.
ಲಾಥೂರ್‌ನಲ್ಲಿ ಹಕ್ಕಿ ಜ್ವರ ಕಾಣಿಸಿಕೊಂಡಿದ್ದು, ಲಾಥೂರ್ ಸೇರಿದಂತೆ ಮಹಾರಾಷ್ಟ್ರದಿಂದ ಕೋಳಿ ಉತ್ಪನ್ನಗಳ ಸರಬರಾಜು ನಿಲ್ಲಿಸುವಂತೆ ಸೂಚನೆ ನೀಡಲಾಗಿದೆ. ಬೀದರ್ ಜಿಲ್ಲೆಯ ಗಡಿಭಾಗದಲ್ಲಿ ಚೆಕ್ ಪೋಸ್ಟ್ ಸ್ಥಾಪನೆ ಮಾಡಿ, ತಪಾಸಣೆ ನಡೆಸಲಾಗುತ್ತಿದೆ.
ಕೋಳಿ ಮತ್ತು ಮಾಂಸ ಮಾರಾಟವನ್ನು ನಿಷೇಧ ಮಾಡಲಾಗಿದೆ. ಬಾಲ್ಕಿ ತಾಲೂಕಿನ ಕಮಲಾಪುರದಲ್ಲಿ ಚೆಕ್ ಪೋಸ್ಟ್ ಸ್ಥಾಪಿಸಲಾಗಿದೆ. ಪಶುಸಂಗೋಪನೆ ಇಲಾಖೆಯಿಂದ ಕಟ್ಟುನಿಟ್ಟಿನ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ.