ರಾಜಕೀಯ ಸುದ್ದಿ

ಸೋಲಾಪುರದಲ್ಲಿ ಕರ್ನಾಟಕದ ಬಸ್ ತಡೆದು ಶಿವಸೇನೆ ಕಾರ್ಯಕರ್ತರ ಪುಂಡಾಟ

Share It

ವಿಜಯಪುರ: ಮಹಾರಾಷ್ಟ್ರದ ಸೋಲಾಪುರ ನಗರದ ಸಾಥ್‌ ರಸ್ತೆಯಲ್ಲಿ ಸೋಮವಾರ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗೆ ಸೇರಿದ ಇಳಕಲ್-ಸೋಲಾಪುರ ನಗರಗಳ ನಡುವೆ ಸಂಚರಿಸುವ ಬಸ್ (ಕೆಎ 29 ಎಫ್ 1350) ಅನ್ನು ತಡೆದ ಶಿವಸೇನೆ (ಉದ್ಧವ್ ಠಾಕರೆ) ಬಣದ 15 ರಿಂದ 20 ಕಿಡಿಗೇಡಿಗಳು ಪುಂಡಾಟ ಮೆರೆದಿದ್ದಾರೆ.

ಚಾಲಕನನ್ನು ಬಸ್ಸಿನಿಂದ ಕೆಳಗೆ ಇಳಿಸಿ, ಮುಖಕ್ಕೆ ಕೇಸರಿ ಬಣ್ಣ ಬಳಿದು ಜೈ ಮಹಾರಾಷ್ಟ್ರ ಎಂದು ಘೋಷಣೆ ಹೇಳಿಸಿದ್ದಾರೆ. ಛತ್ರಪತಿ ಶಿವಾಜಿ ಮಹಾರಾಜ್ ಕಿ ಜೈ, ಜೈ ಮಹಾರಾಷ್ಟ್ರ, ಜೈ ಭವಾನಿ ಎಂದು ಬಸ್ಸಿನ ಮೇಲೆ ಬರೆದು, ಘೋಷಣೆ ಕೂಗಿದ್ದಾರೆ.

ಬಸ್ಸಿನಲ್ಲಿ ಸುಮಾರು 35 ಪ್ರಯಾಣಿಕರು ಇದ್ದರು. ಪುಂಡಾಟ ಬಳಿಕ ಬಸ್ಸನ್ನು ಬಿಟ್ಟು ಕಳುಹಿಸಿದ್ದಾರೆ. ಸ್ಥಳಕ್ಕೆ ಸದರ್ ಬಜಾರ್ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು.


Share It

You cannot copy content of this page