ಹಾವೇರಿ: ರಾಜ್ಯದಲ್ಲಿ ಸುರಿಯುತ್ತಿರುವ ಮಹಾಮಳೆಗೆ ಮತ್ತೊಂದು ಬಲಿಯಾಗಿದೆ. ಕಳೆದ ಕೆಲ ದಿನಗಳಿಂದ ಬೆಂಬಿಡದೆ ಮಳೆಯಾಗುತ್ತಿದ್ದು, ಪರಿಣಾಮ ಗೋಡೆ ಕುಸಿದು ಮಹಿಳೆಯೊಬ್ಬರು ಸಾವನ್ನಪ್ಪಿರುವ ಘಟನೆ ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನಲ್ಲಿ ನಡೆದಿದೆ.
ಮೃತ ಮಹಿಳೆಯನ್ನು ಕಿರವಾಡ ಗ್ರಾಮದ ನಿವಾಸಿ ಶಾಂತಮ್ಮ ತಳವಾರ (52) ಎಂದು ಗುರುತಿಸಲಾಗಿದೆ.
ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿ ರಾಜ್ಯದಲ್ಲಿ ಭಾರೀ ಮಳೆಯಾಗುತ್ತಿದ್ದು, ಇದೀಗ ನಿರಂತರವಾಗಿ ಮಳೆ ಸುರಿದ ಪರಿಣಾಮ ಗೋಡೆ ಕುಸಿದಿದೆ.
ಮಳೆ ನೀರು ಬಿದ್ದು ಬಿದ್ದು, ಒದ್ದೆಯಾಗಿದ್ದು, ಇದೀಗ ಜೋರಾಗಿ ಗಾಳಿ ಬಂದ ಹಿನ್ನಲೆ ಗೋಡೆ ಕುಸಿದಿದೆ. ಈ ವೇಳೆ ಅಲ್ಲೇ ಇದ್ದ ಶಾಂತಮ್ಮ ಅವರ ಮೇಲೆ ಬಿದ್ದಿದೆ ಪರಿಣಾಮ ಮಹಿಳೆ ಸಾವನ್ನಪ್ಪಿದ್ದಾರೆ. ಸದ್ಯ ಸ್ಥಳಕ್ಕೆ ಹಾನಗಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.