ಉಪಯುಕ್ತ ಸುದ್ದಿ

ಜುಲೈ 15 ಕ್ಕೆ ಶಕ್ತಿ ಯೋಜನೆಯ ಮಹಾವಿಕ್ರಮ : 500 ಕೋಟಿ ತಲುಪಲಿದೆ ಉಚಿತ ಪ್ರಯಾಣಿಕರ ಸಂಖ್ಯೆ

Share It


ಕರ್ನಾಟಕದ ಶಕ್ತಿ ಯೋಜನೆಯ ಹೊಸ ಮೈಲಿಗಲ್ಲು :
ಬೆಂಗಳೂರು: ಕರ್ನಾಟಕ ಸರಕಾರದ ಮಹತ್ವಾಕಾಂಕ್ಷೆಯ ಶಕ್ತಿ ಯೋಜನೆ ಮತ್ತೊಂದು ಮೈಲಿಗಲ್ಲು ತಲುಪಲಿದ್ದು, ಇದೇ ಜು.15 ರಂದು 500 ಕೋಟಿ ಪ್ರಯಾಣಿಕರ ಬೃಹತ್ ಸಂಖ್ಯೆಯ ದಾಖಲೆಯನ್ನು ಬರೆಯಲಿದೆ.

ಮಹಿಳಾ ಸಬಲೀಕರಣದ ದೃಷ್ಟಿಯಿಂದ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಆರಂಭಿಸಿದ್ದ ಗ್ಯಾರಂಟಿ ಯೋಜನೆಗಳಲ್ಲೊಂದಾದ ಶಕ್ತಿ ಯೋಜನೆ ಇತಿಹಾಸ ನಿರ್ಮಿಸಲು ಸಜ್ಜಾಗಿದೆ. ಈ ಯೋಜನೆಯಡಿ ಉಚಿತವಾಗಿ ಪ್ರಯಾಣಿಸಿದ ಮಹಿಳಾ ಪ್ರಯಾಣಿಕರ ಸಂಖ್ಯೆ ಜು. 15 ಕ್ಕೆ  500 ಕೋಟಿ ತಲುಪಲಿದೆ ಎಂದು ಅಂದಾಜಿಸಲಾಗಿದ್ದು, ಕರ್ನಾಟಕ ಸರಕಾರದ ಶಕ್ತಿ ಯೋಜನೆ ದೇಶದ ಸಾರಿಗೆ ಕ್ಷೇತ್ರದಲ್ಲಿ ಮಹಿಳೆಯರಿಗೆ ನೀಡಿದ ಅನನ್ಯ ಪ್ರೋತ್ಸಾಹಕ್ಕೆ ಸಾಕ್ಷಿಯಾಗಲಿದೆ.
ಈ ಯೋಜನೆಯ ಆರಂಭದಿಂದಲೇ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ನೀಡಲಾಗುತ್ತಿದ್ದು, ಇದರಿಂದ ಮಹಿಳೆಯರ ಆರ್ಥಿಕ ಸ್ವಾತಂತ್ರ್ಯ, ಶಿಕ್ಷಣ, ಉದ್ಯೋಗ ಮತ್ತು ಆರೋಗ್ಯ ಕ್ಷೇತ್ರಗಳಿಗೆ ಸಹಕಾರಿಯಾಗಿದೆ. ಸಾರಿಗೆ ಇಲಾಖೆ ಹಾಗೂ ಸರ್ಕಾರ ಈ ಸಾಧನೆಯನ್ನು ಸಂಭ್ರಮಿಸಲು ಸಜ್ಜಾಗಿದ್ದು, ಮಹಿಳಾ ಸಬಲೀಕರಣದ ದಿಕ್ಕಿನಲ್ಲಿ ಇಡಲಾಗಿರುವ ಈ ದಿಟ್ಟ ಹೆಜ್ಜೆಯು ದೇಶಕ್ಕೆ ಮಾದರಿಯಾಗಿದೆ.

ಶಕ್ತಿ ಯೋಜನೆಯ ಕುರಿತು ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ. ಈ ಯೋಜನೆಯಿಂದ ಮಹಿಳಾ ಸಬಲೀಕರಣ, ಉದ್ಯೋಗಸ್ಥ ಮಹಿಳೆಯರ ಸಂಖ್ಯೆ ಹೆಚ್ಚಾಗಿರುವುದನ್ನು ಅಂತಾರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.  ಈ ನಿಟ್ಟಿನಲ್ಲಿ ಇದೀಗ ಶಕ್ತಿ ಯೋಜನೆ ಮತ್ತೊಂದು ಮೈಲಿಗಲ್ಲು ಮುಟ್ಟಿದೆ.


Share It

You cannot copy content of this page