ತಿಪಟೂರು: ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಯುವಕರು ಸಾವನ್ನಪ್ಪಿದ್ದು, ಮತ್ತೊಬ್ಬನ ಸ್ಥಿತಿ ಗಂಭೀರವಾಗಿದೆ.
ತಾಲೂಕಿನ ಜೈಪುರ ಗೇಟ್ ಬಳಿ ಘಟನೆ ನಡೆದಿದ್ದು, ವೇಗವಾಗಿ ಬರುತ್ತಿದ್ದ ಎರಡು ಬೈಕ್ ಗಳು ಮುಖಾಮುಖಿ ಡಿಕ್ಕಿಯಾಗಿವೆ. ಪರಿಣಾಮ ಹೊಳೇನರಸೀಪುರ ತಾಲೂಕಿನ ಕಳ್ಳಿ ಗ್ರಾಮದ ನವೀನ್ ಮತ್ತು ತಿಪಟೂರು ತಾಲೂಕಿನ ಗಂಗನಘಟ್ಟದ ಶೇಷಾದ್ರಿ(47) ಎಂಬುವವರು ಸಾವನ್ನಪ್ಪಿದ್ದಾರೆ.
ಸಚಿನ್ ಎಂಬ ಮತ್ತೊಬ್ಬ ಯುವಕನ ಸ್ಥಿತಿ ಗಂಭೀರವಾಗಿದ್ದು, ತಿಪಟೂರು ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿದೆ. ಈ ಸಂಬಂಧ ನೊಣವಿನಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೋಲಿಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
