2025 ರ ಚಾಂಪಿಯನ್ಸ್ ಕ್ರಿಕೆಟ್ ಟ್ರೋಫಿ ಟೂರ್ನಿಯಲ್ಲಿ ಬಿ ಗುಂಪಿನಿಂದ ಆಸ್ಟ್ರೇಲಿಯಾ ಮೊದಲ ತಂಡವಾಗಿ ಸೆಮಿಫೈನಲ್‌ಗೆ ಇಂದು ಅಧಿಕೃತವಾಗಿ ಅರ್ಹತೆ ಪಡೆದುಕೊಂಡಿದೆ.
ಪಾಕಿಸ್ತಾನದ ಲಾಹೋರ್‌ನಲ್ಲಿ ಇಂದು ನಡೆದ ಆಸ್ಟ್ರೇಲಿಯಾ ಮತ್ತು ಅಫ್ಘಾನಿಸ್ತಾನ ತಂಡಗಳ ನಡುವಿನ ನಿರ್ಣಾಯಕ ಪಂದ್ಯವು ಮಳೆಯಿಂದಾಗಿ ರದ್ದಾಯಿತು. ಈ ಕಾರಣದಿಂದಾಗಿ, ಆಸ್ಟ್ರೇಲಿಯಾ ಸೆಮಿಫೈನಲ್‌ಗೆ ಅರ್ಹತೆ ಪಡೆದರೆ, ಇತ್ತ ಅಫ್ಘಾನಿಸ್ತಾನ ಟೂರ್ನಿಯಿಂದ ಹೊರಬೀಳುವ ಸ್ಥಿತಿಯಲ್ಲಿದೆ.
ನಾಳೆ ಮಾರ್ಚ್ 1 ರ ಶನಿವಾರ ನಡೆಯಲ್ಲಿರವ ದಕ್ಷಿಣ ಆಫ್ರಿಕಾ ಮತ್ತು ಇಂಗ್ಲೆಂಡ್ ತಂಡಗಳ ನಡುವಿನ ಪಂದ್ಯದ ಫಲಿತಾಂಶದ ಮೇಲೆ ಯಾವ ತಂಡ ಸೆಮಿಫೈನಲ್ಗೇರುತ್ತದೆ ಎಂಬುದು ನಿರ್ಧಾರವಾಗಲಿದೆ. ನಾಳಿನ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡ ಬೃಹತ್ ಅಂತರದಿಂದ ಸೋತರೆ ಮಾತ್ರ ಅಫ್ಘಾನಿಸ್ತಾನಕ್ಕೆ ಕೊನೆಯ ಅವಕಾಶ ಸಿಗಲಿದೆ.
ಮಳೆಯಿಂದ ಅಫ್ಘಾನಿಸ್ತಾನ-ದಕ್ಷಿಣ ಆಫ್ರಿಕಾ ಪಂದ್ಯ ರದ್ದು!
ಎ ಗುಂಪಿನಲ್ಲಿ ಭಾರತ ಮತ್ತು ನ್ಯೂಜಿಲೆಂಡ್ ಈಗಾಗಲೇ ಸೆಮಿಫೈನಲ್ ತಲುಪಿವೆ. ಆದರೆ ಬಿ ಗುಂಪಿನಿಂದ ಮಾತ್ರ ಇದುವರೆಗೆ ಯಾವ ತಂಡವೂ ಸೆಮಿಫೈನಲ್ ತಲುಪಿರಲಿಲ್ಲ. ಇಂದು ನಡೆದ ಆಸ್ಟ್ರೇಲಿಯಾ ಮತ್ತು ಅಫ್ಘಾನಿಸ್ತಾನ ನಡುವಿನ ಪಂದ್ಯ ಮಳೆಯಿಂದ ರದ್ದಾದ ಕಾರಣ ಉಭಯ ತಂಡಗಳು ತಲಾ ಒಂದೊಂದು ಅಂಕ ಪಡೆದಿವೆ. ಹೀಗಾಗಿ ಈ ಪಂದ್ಯದಿಂದ 1 ಅಂಕ ಪಡೆದ ಆಸ್ಟ್ರೇಲಿಯಾ ಒಟ್ಟು 3 ಪಂದ್ಯಗಳಿಂದ 4 ಅಂಕ ಸಂಪಾದಿಸಿ ನೇರವಾಗಿ ಬಿ ಗುಂಪಿನಿಂದ ಸೆಮಿಫೈನಲ್ ಪ್ರವೇಶಿಸಿದೆ. ವಾಸ್ತವವಾಗಿ ಆಸ್ಟ್ರೇಲಿಯಾ ಹಾಗೂ ದಕ್ಷಿಣ ಆಫ್ರಿಕಾ ನಡುವಿನ ಪಂದ್ಯವೂ ಮಳೆಯಿಂದಾಗಿ ರದ್ದಾಗಿತ್ತು. ಹೀಗಾಗಿ ಉಭಯ ತಂಡಗಳಿಗೆ ತಲಾ ಒಂದು ಅಂಕ ನೀಡಲಾಗಿತ್ತು. ಇದೀಗ ಈ ಪಂದ್ಯವೂ ರದ್ದಾದ ಕಾರಣ ಎರಡೂ ತಂಡಗಳಿಗೆ ತಲಾ ಒಂದೊಂದು ಅಂಕ ನೀಡಲಾಯಿತು. ಒಟ್ಟಾರೆ 3 ಲೀಗ್ ಪಂದ್ಯಗಳಿಂದ ಆಸ್ಟ್ರೇಲಿಯಾ 4 ಅಂಕ ಗಳಿಸಿ ಸೆಮಿಫೈನಲ್ ಪ್ರವೇಶಿಸಿತು.
Australia advance to the semis 🇦🇺#ChampionsTrophy #AFGvAUS ✍️: https://t.co/17Q04ho1qz pic.twitter.com/G0ZIFeTl78
— ICC (@ICC) February 28, 2025
ಅಫ್ಘನ್ಗೆ ಇನ್ನೂ ಇದೆ ಸೆಮಿಫೈನಲ್ ತಲುಪುವ ಅವಕಾಶ!
ಇಂದಿನ ಪಂದ್ಯ ರದ್ದಾದ ಕಾರಣ ಅಫ್ಘಾನಿಸ್ತಾನದ ಬಳಿ ಒಟ್ಟು 3 ಅಂಕಗಳಿವೆ. ಇತ್ತ ದಕ್ಷಿಣ ಆಫ್ರಿಕಾ ತಂಡದ ಬಳಿವೂ 3 ಅಂಕಗಳಿವೆ. ಆದರೆ ದಕ್ಷಿಣ ಆಫ್ರಿಕಾ ತಂಡ ಇನ್ನೂ ತನ್ನ ಕೊನೆಯ ಪಂದ್ಯವನ್ನು ಆಡಬೇಕಾಗಿದೆ. ಈ ಪಂದ್ಯವು ಮಾರ್ಚ್ 1 ರ ಶನಿವಾರ ಇಂಗ್ಲೆಂಡ್ ವಿರುದ್ಧ ನಡೆಯಲಿದೆ. ಈ ಪಂದ್ಯವನ್ನು ದಕ್ಷಿಣ ಆಫ್ರಿಕಾ ಗೆದ್ದರೆ ಮುಂದಿನ ಸುತ್ತಿಗೆ ಪ್ರವೇಶ ಪಡೆಯುತ್ತದೆ. ಒಂದು ವೇಳೆ ಸ್ವಲ್ಪ ಅಂತರದಿಂದ ಸೋತರೂ, ಮುಂದಿನ ಸುತ್ತಿಗೆ ದಕ್ಷಿಣ ಆಫ್ರಿಕಾ ತಂಡವೇ ಸೆಮಿಫೈನಲ್ ಸ್ಥಾನ ಪಡೆಯಲಿದೆ. ಏಕೆಂದರೆ ದಕ್ಷಿಣ ಆಫ್ರಿಕಾದ ನೆಟ್ ರನ್ ರೇಟ್ ಪ್ರಸ್ತುತ ಅಫ್ಘಾನಿಸ್ತಾನಕ್ಕಿಂತ ಹೆಚ್ಚಾಗಿದೆ. ಒಂದು ವೇಳೆ ದಕ್ಷಿಣ ಆಫ್ರಿಕಾ, ಇಂಗ್ಲೆಂಡ್ ವಿರುದ್ಧ ಭಾರಿ ಅಂತರದಲ್ಲಿ ಸೋತು, ಅದರ ನೆಟ್ ರನ್ ರೇಟ್ ಅಫ್ಘಾನಿಸ್ತಾನದ ನೆಟ್ ರನ್ರೇಟ್ಗಿಂತ ಕಡಿಮೆಯಾದರೆ ಮಾತ್ರ ಅಫ್ಘಾನಿಸ್ತಾನಕ್ಕೆ ಸೆಮಿಫೈನಲ್ ಟಿಕೆಟ್ ಸಿಗಲಿದೆ.