ಆರೋಗ್ಯ ರಾಜಕೀಯ ಸುದ್ದಿ

ವಿಧಾನಸಭೆಯ ಜೆಡಿಎಸ್ ಮುಖ್ಯ ಸಚೇತಕತರಾಗಿ ಹರೀಶ್ ಗೌಡ ಆಯ್ಕೆ

Share It

ಬೆಂಗಳೂರು, ಮಾ.4: ಮೈಸೂರು ಜಿಲ್ಲೆಯ ಹುಣಸೂರು ಕ್ಷೇತ್ರದ ಶಾಸಕ ಜಿ.ಡಿ.ಹರೀಶ್‌ಗೌಡ ಅವರನ್ನು ಜೆಡಿಎಸ್‌‍ ಪಕ್ಷದ ಮುಖ್ಯ ಸಚೇತಕರನ್ನಾಗಿ ನೇಮಿಸಲಾಗಿದೆ.

ಜೆಡಿಎಸ್‌‍ ಶಾಸಕಾಂಗ ಪಕ್ಷದ ನಾಯಕ ಸುರೇಶ್‌ಬಾಬು ಅವರು ಜಿ.ಡಿ.ಹರೀಶ್‌ಗೌಡ ಅವರನ್ನು ಪಕ್ಷದ ಮುಖ್ಯ ಸಚೇತಕರನ್ನಾಗಿ ನೇಮಕ ಮಾಡಿರುವ ಬಗ್ಗೆ ವಿಧಾನಸಭಾಧ್ಯಕ್ಷ ಯು.ಟಿ.ಖಾದರ್‌ ಅವರಿಗೆ ಪತ್ರ ಬರೆದಿದ್ದಾರೆ. ನಮ್ಮ ಪಕ್ಷದ ಮುಖ್ಯ ಸಚೇತಕರಿಗೆ ಸೂಕ್ತ ಸ್ಥಾನಮಾನದ ವ್ಯವಸ್ಥೆ ಮಾಡುವಂತೆ ಸಂಬಂಧಪಟ್ಟವರಿಗೆ ನಿರ್ದೇಶನ ನೀಡಲು ಅವರು ಪತ್ರದಲ್ಲಿ ಕೋರಿದ್ದಾರೆ.

ಜೆಡಿಎಲ್‌ಪಿ ನಾಯಕ ಸ್ಥಾನ ಸಿಗದೆ ಅಸಮಾಧಾನಗೊಂಡಿದ್ದ ಮಾಜಿ ಶಾಸಕ ಹಾಗೂ ಹಿರಿಯ ಶಾಸಕ ಜಿ.ಟಿ.ದೇವೇಗೌಡರ ಮನ ಒಲಿಸುವ ಉದ್ದೇಶದಿಂದ ಅವರ ಪುತ್ರ ಹರೀಶ್‌ಗೌಡ ಅವರನ್ನು ಜೆಡಿಎಸ್‌‍ ವರೀಷ್ಠರು ಮುಖ್ಯ ಸಚೇತಕ ಸ್ಥಾನ ನೀಡಿದ್ದಾರೆ ಎಂದು ರಾಜಕೀಯವಾಗಿ ವ್ಯಾಖ್ಯಾನಿಸಲಾಗುತ್ತಿದೆ.


Share It

You cannot copy content of this page