ಬೆಂಗಳೂರು: ದಲಿತರ PTCL ಭೂಮಿ ವಿಚಾರದಲ್ಲಿ AC ಮತ್ತು DC ನ್ಯಾಯಾಲಯಗಳಲ್ಲಿ ನ್ಯಾಯ ಸಿಗುತ್ತಿಲ್ಲ. ಬಹುತೇಕ ಪ್ರಕರಣಗಳು ಹೈಕೋರ್ಟ್ ಮತ್ತು ಸುಪ್ರೀಂ ಹಂತಕ್ಕೆ ಹೋಗುತ್ತಿದ್ದು, ಸುಪ್ರೀಂ ಕೋರ್ಟ್ ನಲ್ಲಿ ನ್ಯಾಯ ಒದಗಿಸಲು ಕಪಿಲ್ ಸಿಬಲ್ ಅವರನ್ನು ನೇಮಿಸಿಕೊಳ್ಳಲು ಸರಕಾರ ತೀರ್ಮಾನಿಸಿದೆ.
ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ವಿಧಾನಸೌಧದಲ್ಲಿ ನಡೆದ Sc/St ದೌರ್ಜನ್ಯ ನಿಯಂತ್ರಣ ಜಾಗೃತ ಹಾಗೂ ಉಸ್ತುವಾರಿ ಸಮಿತಿ ಸಭೆಯಲ್ಲಿ ಈ ಕುರಿತು ಮಹತ್ವದ ತೀರ್ಮಾನ ತೆಗೆದುಕೊಂಡಿದ್ದು, ಖ್ಯಾತ ಸುಪ್ರೀಂ ಕೋರ್ಟ್ ವಕೀಲರಾದ ಕಪಿಲ್ ಸಿಬಲ್ ಇನ್ಮುಂದೆ PTCL ಪ್ರಕರಣಗಳ ಪರವಾಗಿ ಸುಪ್ರೀಂ ಕೋರ್ಟ್ ನಲ್ಲಿ ವಾದ ಮಂಡನೆ ಮಾಡಲಿದ್ದಾರೆ.
PTCL ಪ್ರಕರಣಗಳಲ್ಲಿ AC ಮತ್ತು DC ಹಂತದಲ್ಲಿ ಪರಿಣಾಮಕಾರಿ ತೀರ್ಮಾನವಾಗುತ್ತಿಲ್ಲ. ಅವರ ವೈಫಲ್ಯದಿಂದ ಬಹುತೇಕ ಪ್ರಕರಣಗಳು ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್ ಅಂಗಳಕ್ಕೆ ಹೋಗುತ್ತಿವೆ. ಇದರಿಂದ ಸಮುದಾಯದ ಜನರಿಗೆ ಭೂಮಿ ಸಿಗುವಲ್ಲಿ ವಿಳಂಬ ಆಗುತ್ತಿದೆ. ಇದಕ್ಕೆ ಸೂಕ್ತ ಪರಿಹಾರ ಒದಗಿಸಬೇಕು ಎಂದು ಬಹುತೇಕ ಶಾಸಕರು ಒತ್ತಾಯಿಸಿದರು.
ಈ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ನಲ್ಲಿ PTCL ಪರ ವಕೀಲರಾಗಿ ಕಪಿಲ್ ಸಿಬಲ್ ಅವರನ್ನು ನೇಮಿಸಿಕೊಳ್ಳುವ ಸಂಬಂಧ ಸಿಎಂ ಸಿದ್ದರಾಮಯ್ಯ ತೀರ್ಮಾನ ತೆಗೆದುಕೊಂಡಿತು ತೆಗೆದುಕೊಂಡಿದ್ದಾರೆ. ಆ ಮೂಲಕ PTCL ಕಾಯಿದೆಗಳಲ್ಲಿ ತ್ವರಿತ ನ್ಯಾಯ ಒದಗಿಸಲು ತೀರ್ಮಾನ ತೆಗೆದುಕೊಳ್ಳುವ ಭರವಸೆ ನೀಡಿದ್ದಾರೆ.