88ನೇ ಸಾಹಿತ್ಯ ಸಮ್ಮೇಳನ ಬಳ್ಳಾರಿಯಲ್ಲಿ

protest-MES
Share It

ಮಂಡ್ಯ: ಮಂಡ್ಯದಲ್ಲಿ ನಡೆಯುತ್ತಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಇಂದು ತೆರೆ ಬೀಳಲಿದ್ದು, 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಬಳ್ಳಾರಿಯಲ್ಲಿ ಆಯೋಜಿಸಲು ಶನಿವಾರ ನಡೆದ ಕನ್ನಡ ಸಾಹಿತ್ಯ ಪರಿಷತ್ತು ಸಭೆಯಲ್ಲಿ ನಿರ್ಧರಿಸಲಾಗಿದೆ.

ಬಳ್ಳಾರಿ, ಕೋಲಾರ, ಯಾದಗಿರಿ ಸೇರಿದಂತೆ ಹೊಸ ಜಿಲ್ಲೆಗಳು ಸಾಹಿತ್ಯ ಸಮ್ಮೇಳನಕ್ಕೆ ಅತಿಥ್ಯಕ್ಕೆ ಕೋರಿಕೆ ಸಲ್ಲಿಸಿದವು. ಆದರೆ, ಅಂತಿಮವಾಗಿ ಬಳ್ಳಾರಿ ಜಿಲ್ಲೆಗೇ ಸಮ್ಮೇಳನದ ಅತಿಥ್ಯ ನೀಡಲು ಎಲ್ಲ ಜಿಲ್ಲಾ ಸಮಿತಿಗಳು ನಿರ್ಧರಿಸಿವೆ.

ಬಳ್ಳಾರಿಗೆ 66 ವರ್ಷದ ಬಳಿಕ ಮರಳಿ ಸಾಹಿತ್ಯ ಸಮ್ಮೇಳನದ ಅತಿಥ್ಯ ದೊರೆಯುತ್ತಿದೆ. ಈ ಹಿಂದೆ 1926, 1938 ಮತ್ತು 1958ರಲ್ಲಿ ಸಾಹಿತ್ಯ ಸಮ್ಮೇಳನ ನಡೆದಿತ್ತು. ಮಂಡ್ಯದಲ್ಲಿ ಕಳೆದ ಎರಡು ದಿನಗಳಲ್ಲಿ ಸಾಹಿತ್ಯ ಸಮ್ಮೇಳನಕ್ಕೆ 3 ಲಕ್ಷ ಜನರು ಆಗಮಿಸುವ ಮೂಲಕ ದಾಖಲೆ ನಿರ್ಮಿಸಿದ್ದರು. ಸಮ್ಮೇಳನದ ಅಂಗವಾಗಿ 450 ಪುಸ್ತಕ ಮಳಿಗೆಗಳನ್ನು ತೆರೆಯಲಾಗಿದೆ.

ಸಾಹಿತ್ಯ ಸಮ್ಮೇಳನಕ್ಕೆ ಇಂದು ತೆರೆ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಇಂದು ತೆರೆ ಬೀಳಲಿದೆ. ಸಂಜೆ 4ಕ್ಕೆ ನಡೆಯಲಿರುವ ಸಮಾರೋಪ ಕಾರ್ಯಕ್ರಮದಲ್ಲಿ ಆದಿಚುಂಚನಗಿರಿ ಪೀಠಾಧ್ಯಕ್ಷ ನಿರ್ಮಲಾನಂದನಾಥ ಶ್ರೀಗಳ ದಿವ್ಯ ಸಾನಿದ್ಯ ವಹಿಸಲಿದ್ದಾರೆ. ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ, ವಿಪಕ್ಷ ನಾಯಕ ಆರ್.ಅಶೋಕ್, ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಸೇರಿದಂತೆ ಹಲವು ಸಚಿವರು, ಶಾಸಕರು ಭಾಗಿಯಾಗಲಿದ್ದಾರೆ.


Share It

You cannot copy content of this page