ಗಂಗಾವತಿ: ಬೆಳಗಾವಿ ಬಸ್ ಕಂಡಕ್ಟರ್ ಮೇಲಿನ ಹಲ್ಲೆ ಎರಡು ರಾಜ್ಯಗಳ ನಡುವಿನ ಸಂಪರ್ಕವನ್ನೇ ಬಂದ್ ಮಾಡಿರುವ ಹೊತ್ತಿನಲ್ಲಿ ಮತ್ತೊಂದು ಅಂತಹದ್ದೇ ಪ್ರಕರಣ ಗಂಗಾವತಿ ಪಟ್ಟಣದಲ್ಲಿ ನಡೆದಿದೆ.
KKSRTC ಬಸ್ ಕಂಡಕ್ಟರ್ ಹನುಮಂತ ಎಂಬುವವರ ಮೇಲೆ ಪ್ರಯಾಣಿಕನೊಬ್ಬ ಏಕಾಏಕಿ ಹಲ್ಲೆ ನಡೆಸಿದ್ದು, ಕಂಡಕ್ಟರ್ ಕಣ್ಣಿಗೆ ಬಲವಾದ ಪೆಟ್ಟು ಬಿದ್ದಿದೆ. ಗಾಯಾಳು ಹನುಮಂತನಿಗೆ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಶ್ರೀಧರ್ ಎಂಬ ಪ್ರಯಾಣಿಕ ಟಿಕೆಟ್ ಬೆಲೆ ಏರಿಕೆ ಮಾಡಿದ್ದನ್ನು ಪ್ರಶ್ನಿಸಿ ಕಂಡಕ್ಟರ್ ಮೇಲೆ ಹಲ್ಲೆ ನಡೆಸಿದ್ದಾನೆ. ಈ ಸಂಬಂಧ ಗಂಗಾವತಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಆರೋಪಿ ಕುಡಿದ ಮತ್ತಿನಲ್ಲಿ ಹಲ್ಲೆ ನಡೆಸಿದ್ದಾನೆ ಎಂದು ಹೇಳಲಾಗಿದೆ.