ಸಿಎಂ ಸಿದ್ದರಾಮಯ್ಯಗೆ ಬಿಗ್ ರಿಲೀಫ್: ಮೂಡಾ ಪ್ರಕರಣ CBI ತಬಿಖೆಗೆ ಹೈಕೋರ್ಟ್ ನಕಾರ
ಧಾರವಾಡ: ಸಿಎಂ ಸಿದ್ದರಾಮಯ್ಯ ಅವರಿಗೆ ಹೈಕೋರ್ಟ್ ಬಿಗ್ ರಿಲೀಫ್ ಕೊಟ್ಟಿದ್ದು, ಸಿಬಿಐ ತನಿಖೆಗೆ ವಹಿಸಲು ನಿರಾಕರಿಸಿದೆ.
ಹೈಕೋರ್ಟ್ ನ ಧಾರವಾಡ ಪೀಠದಲ್ಲಿ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಮುಂದೆ ಪ್ರಕರಣ ವಿಚಾರಣೆಗೆ ಬಂದಿತ್ತು. ವಿಚಾರಣೆ ನಡೆಸಿದ ನ್ಯಾಯಪೀಠ, ಸಿಬಿಐ ತನಿಖೆಗೆ ವಹಿಸಲು ನಿರಾಕರಿಸಿದೆ.
ಈಗಾಗಲೇ ಲೋಕಾಯುಕ್ತ ತನಿಖೆ ನಡೆಯುತ್ತಿದೆ. ನ್ಯಾಯಾಂಗ ತನಿಖೆಗೂ ಸರಕಾರ ಆದೇಶ ನೀಡಿದೆ. ನ್ಯಾಯಾಂಗ ತನಿಖೆ ನಡೆಯುತ್ತಿದೆ. ಈಗ ಸಿಬಿಐ ತನಿಖೆಯ ಅವಶ್ಯಕತೆ ಇಲ್ಲ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.


