ಬೆಂಗಳೂರು: ಜಾತಿಗಣತಿ ವರದಿ ಜಾರಿ ಮಾಡಿದರೆ ಸರಕಾರ ಬಿದ್ದು ಹೋಗುತ್ತದೆ ಎಂದು ಕೆಲವರು ಬೆದರಿಕೆ ಹಾಕುತ್ತಿದ್ದಾರೆ. ಜಾತಿಗಣತಿ ಜಾರಿಯಿಂದ ಸರಕಾರ ಬೀಳುವುದಾಗಲೀ, ವರದಿ ಜಾರಿಯಾಗಲೇಬೇಕು ಎಂದು ಕಾಂಗ್ರೆಸ್ ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್ ಹೇಳಿದ್ದಾರೆ.
ಜಾತಿಗಣತಿ ಜಾರಿ ಮಾಡಿಯೇ ತೀರುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ನೀಡಿರುವ ಹೇಳಿಕೆಗೆ ಪಕ್ಷದಲ್ಲಿಯೇ ವಿರೋಧ ವ್ಯೊ್ತವಾಗುತ್ತಿರುವ ಬೆನ್ನಲ್ಲೇ ಹರಿಪ್ರಸಾದ್ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಜಾತಿಗಣತಿ ವರದಿಯಿಂದಲೇ ಸರಕಾರ ಬಿದ್ದು ಹೋಗುವುದಾದರೆ ಹೋಗಲಿ ಎಂದಿದ್ದಾರೆ.
ಜಾತಿಗಣತಿ ಜಾರಿಗೆ ರಾಹುಲ್ ಗಾಂಧಿ ಮತ್ತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಅನುಮತಿ ಕೊಟ್ಟಿದ್ದಾರೆ. ಆದರೂ, ರಾಜ್ಯದ ಕೆಲ ನಾಯಕರು ವಿರೋಧ ಮಾಡುತ್ತಿದ್ದಾರೆ. ವರದಿ ಜಾರಿಯಾದರೆ, ಸರಕಾರ ಬೀಳುತ್ತದೆ ಎನ್ನುತ್ತಿದ್ದಾರೆ. ಇದಕ್ಕೆಲ್ಲ ಸರಕಾರ ತಲೆ ಕೆಡಿಸಿಕೊಳ್ಳಬಾರದು ಎಂದಿದ್ದಾರೆ.
ಜಾತಿಗಣತಿಯಿಂದ ಹಿಂದುಳಿದ ಸಮುದಾಯದ ಏಳಿಗೆಗೆ ಅನುಕೂಲವಾಗುತ್ತದೆ. ಇದನ್ನು ಸಹಿಸದವರು ಕೆಲವರು ಇದನ್ನು ವಿರೋಧಿಸುತ್ತಾರೆ. ಇದಕ್ಕೆಲ್ಲ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಲೆ ಕೆಡಿಸಿಕೊಳ್ಳಬಾರದು. ಜಾತಿಗಣತಿ ವರದಿ ಜಾರಿ ಮಾಡಿಯೇ ಮಾಡಬೇಕು ಎಂದು ತಿಳಿಸಿದ್ದಾರೆ.