ಬೆಂಗಳೂರು: ನಾಗಮಂಗಲದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ತನ್ನ ಆಂತರಿಕ ಸತ್ಯಶೋಧನಾ ಸಮಿತಿಯನ್ನು ರಚನೆ ಮಾಡಿದ್ದು, ನಾಳೆ ಸಮಿತಿ ನಾಗಮಂಗಲಕ್ಕೆ ಭೇಟಿ ನೀಡಲಿದೆ.
ಮಾಜಿ ಡಿಸಿಎಂ ಡಾ. ಅಶ್ವತ್ಥ ನಾರಾಯಣ ನೇತೃತ್ವದಲ್ಲಿ ಸಮಿತಿ ರಚನೆ ಮಾಡಲಾಗಿದ್ದು, ಸಮಿತಿಯಲ್ಲಿ ಉಪಾಧ್ಯಕ್ಷರಾಗಿ ಬೈರತಿ ಬಸವರಾಜ್, ಕೆ.ಸಿ. ನಾರಾಯಣ ಗೌಡ, ಬಿಜೆಪಿ ರಾಜ್ಯ ಕಾರ್ಯದರ್ಶಿ ಲಕ್ಷಿö್ಮÃ ಅಶ್ವಿನ್ ಗೌಡ ಹಾಗೂ ನಿವೃತ್ತ ಪೊಲೀಸ್ ಅಧಿಕಾರಿ ಭಾಸ್ಕರ್ ರಾವ್ ಇದ್ದಾರೆ.
ಸೋಮವಾರ ಬೆಳಗ್ಗೆ ೧೦ ಗಂಟೆಗೆ ನಾಗಮಂಗಲಕ್ಕೆ ಭೇಟಿ ನೀಡಲಿರುವ ಸಮಿತಿ, ಅಲ್ಲಿನ ಸ್ಥಳೀಯರ ಅಭಿಪ್ರಾಯವನ್ನು ಸಂಗ್ರಹಿಸಲಿದ್ದಾರೆ. ಪೊಲೀಸ್ ಅಧಿಕಾರಿಗಳು ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ಪೊಲೀಸರೊಂದಿಗೆ ಮತ್ತು ಸ್ಥಳೀಯರೊಂದಿಗೆ ಚರ್ಚೆ ನಡೆಸಲಿದ್ದಾರೆ.
ಈ ನಡುವೆ ಬಂಧಿತರಾಗಿರುವ ಆರೋಪಿಗಳ ಪೈಕಿ ಇಬ್ಬರು ಕೇರಳ ಮೂಲದವರಾಗಿದ್ದು, ಅವರಿಗೆ ಪಿಎಫ್‌ಐ ನಂಟಿದೆ ಎಂಬ ಅನುಮಾನ ಮೂಡಿದೆ.

