ತಿರುಪತಿ ಲಡ್ಡು ಕಲಬೆರಕೆ: ಸಿಬಿಐ ತನಿಖೆ ಕೋರಿದ್ದ ಅರ್ಜಿ ವಜಾ

Share It

ಹೊಸದಿಲ್ಲಿ: ಭಾರಿ ವಿವಾದಕ್ಕೆ ಕಾರಣವಾಗಿದ್ದ ತಿರುಪತಿ ಲಡ್ಡುವಿನಲ್ಲಿನ ಕಲಬೆರೆಕೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.

ಲಡ್ಡು ಪ್ರಸಾದ ಖರೀದಿ ಮತ್ತು ತಯಾರಿಕೆಯಲ್ಲಿ ಭ್ರಷ್ಟಾಚಾರ ಮತ್ತು ದುರಾಡಳಿತದ ಆರೋಪಗಳ ಬಗ್ಗೆ ಕೇಂದ್ರ ತನಿಖಾ ದಳ (ಸಿಬಿಐ) ಸಮಗ್ರ ತನಿಖೆ ನಡೆಸಬೇಕೆಂದು ಸಾಮಾಜಿಕ ಕಾರ್ಯಕರ್ತ ಮತ್ತು ‘ಗ್ಲೋಬಲ್ ಪೀಸ್ ಇನಿಶಿಯೇಟಿವ್’ ಸಂಘಟನೆA ಅಧ್ಯಕ್ಷ ಕೆ.ಎ. ಪೌಲ್ ಅರ್ಜಿ ಸಲ್ಲಿಸಿದ್ದರು.

ಅರ್ಜಿಯನ್ನು ನ್ಯಾಯಮೂರ್ತಿಗಳಾದ ಬಿ.ಆರ್.ಗವಾಯಿ ಮತ್ತು ಕೆ.ವಿ.ವಿಶ್ವನಾಥನ್ ಅವರನ್ನೊಳಗೊಂಡ ನ್ಯಾಯಪೀಠ ವಜಾಗೊಳಿಸಿದೆ. ಕಲಬೆರಕೆ ತುಪ್ಪ ಸೇರಿ ‘ಲಡ್ಡು ಪ್ರಸಾದ’ ತಯಾರಿಕೆಯಲ್ಲಿ ಕಳಪೆ ಗುಣಮಟ್ಟದ ಪದಾರ್ಥಗಳನ್ನು ಬಳಸಲಾಗಿದೆ ಎಂಬ ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಆರೋಪಗಳು ಭಕ್ತರಲ್ಲಿ ಗಂಭೀರ ಕಳವಳಗಳನ್ನು ಹುಟ್ಟುಹಾಕಿವೆ ಮತ್ತು ಈ ಪವಿತ್ರ ಕ್ಷೇತ್ರದ ಪಾವಿತ್ರ‍್ಯಕ್ಕೆ ಕಳಂಕ ತಂದಿವೆ ಪಿಐಎಲ್‌ನಲ್ಲಿ ತಿಳಿಸಿದ್ದರು.

“ನಿಮ್ಮ ಮನವಿಯನ್ನು ನೋಡದರೆ, ನಾವು ಎಲ್ಲಾ ದೇವಾಲಯಗಳು, ಗುರುದ್ವಾರಗಳು ಇತ್ಯಾದಿಗಳಿಗೆ ಪ್ರತ್ಯೇಕ ರಾಜ್ಯಗಳನ್ನು ರಚಿಸಬೇಕಾಗುತ್ತದೆ. ಒಂದು ನಿರ್ದಿಷ್ಟ ಧರ್ಮಕ್ಕೆ ಪ್ರತ್ಯೇಕ ರಾಜ್ಯ ರಚಿಸಬೇಕೆಂದು ನಾವು ನಿರ್ದೇಶಿಸಲು ಸಾಧ್ಯವಿಲ್ಲ. ನಿಮ್ಮ ಅರ್ಜಿಯನ್ನು ವಜಾಗೊಳಿಸಲಾಗಿದೆ” ಎಂದು ನ್ಯಾಯಪೀಠ ಹೇಳಿತು.

ತಿರುಪತಿ ಲಡ್ಡು ತಯಾರಿಸಲು ಪ್ರಾಣಿಗಳ ಕೊಬ್ಬನ್ನು ಬಳಸಲಾಗಿದೆ ಎಂಬ ಆರೋಪದ ಬಗ್ಗೆ ತನಿಖೆ ನಡೆಸಲು ಸುಪ್ರೀಂ ಕೋರ್ಟ್ ಅ.೪ ರಂದು ಐದು ಸದಸ್ಯರ ಸ್ವತಂತ್ರ ಎಸ್‌ಐಟಿಯನ್ನು ರಚಿಸಿದೆ. ಸಿಬಿಐ ಮತ್ತು ಆಂಧ್ರಪ್ರದೇಶ ಪೊಲೀಸರ ತಲಾ ಇಬ್ಬರು ಅಧಿಕಾರಿಗಳು ಮತ್ತು ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದ ಹಿರಿಯ ಅಧಿಕಾರಿ ಸ್ವತಂತ್ರ ಎಸ್‌ಐಟಿಯಲ್ಲಿ ಇರಲಿದ್ದಾರೆ ಎಂದು ನ್ಯಾಯಾಲಯ ನಿರ್ದೇಶಿಸಿದೆ.


Share It

You May Have Missed

You cannot copy content of this page