ಬೆಂಗಳೂರು: ಇಂದು ಕರಾವಳಿ ಜಿಲ್ಲೆಗಳು ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಿಗೆ ಭಾರೀ ಮಳೆಯಾಗುವ ಸಾಧ್ಯತೆಗಳಿದ್ದು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡಕ್ಕೆ ಭಾರೀ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಶಿವಮೊಗ್ಗ ಹಾಸನ ಹಾಗೂ ಚಿಕ್ಕಮಗಳೂರಿಗೆ ಭಾರೀ ಮಳೆಯಾಗುವ ನಿರೀಕ್ಷೆ ಇರುವುದರಿಂದ ಯೆಲ್ಲೋ ಅಲರ್ಟ್ ನೀಡಲಾಗಿದೆ.
ಬೀದರ್, ಕಲಬುರ್ಗಿ, ಯಾದಗಿರಿ, ರಾಯಚೂರು ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ ಮತ್ತು ನಿರಂತರ ಗಾಳಿಯ ವೇಗ (40-50 ಕಿಮೀ) ಬರುವ ಸಾಧ್ಯತೆಯಿದೆ.
ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ ಮತ್ತು ನಿರಂತರ ಗಾಳಿಯ ವೇಗ (30-40 ಕಿಮೀ) ಬರುವ ಸಾಧ್ಯತೆಯಿದೆ. ಉಳಿದ ಜಿಲ್ಲೆಗಳ ಮೇಲೆ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

