ಉಪಯುಕ್ತ ರಾಜಕೀಯ ಸುದ್ದಿ

ಬಿಪಿಎಲ್, ಎಪಿಎಲ್ ಕಾರ್ಡ್​ಗಳನ್ನು ಯಥಾಸ್ಥಿತಿ ಕಾಯ್ದುಕೊಳ್ಳಲು ನಿರ್ಧಾರ: ಕೆ.ಎಚ್.ಮುನಿಯಪ್ಪ

Share It

ಬೆಂಗಳೂರು: ಕೇಂದ್ರ ಮತ್ತು ರಾಜ್ಯ ಸರ್ಕಾರದ ಒಟ್ಟು 1,50,59,431 ಕಾರ್ಡ್​ಗಳಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೂಚನೆ ಮೇರೆಗೆ ಸದ್ಯ 1,02,509 ಕಾರ್ಡ್​ಗಳನ್ನು​ ಪರಿಷ್ಕರಣೆ ಮಾಡಲಾಗಿದೆ. ಉಳಿದ ಎಲ್ಲ ಬಿಪಿಎಲ್, ಎಪಿಎಲ್ ಕಾರ್ಡ್​ಗಳನ್ನು ಯಥಾಸ್ಥಿತಿ ಕಾಯ್ದುಕೊಳ್ಳಲು ನಿರ್ಧರಿಸಲಾಗಿದೆ ಎಂದು ಆಹಾರ ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮಾನದಂಡಗಳ ಅನ್ವಯ ಪರಿಶೀಲನೆ ಮಾಡಿ ಪರಿಷ್ಕರಣೆ ಮಾಡಲಾಗಿದೆ. ಕೇಂದ್ರ ಸರ್ಕಾರದ ನಿಯಮಗಳ ಅನ್ವಯ ಪರಿಷ್ಕರಿಸಲಾಗಿದೆ. ಅನರ್ಹ ಎಂಬ ಕಾರ್ಡ್​ಗಳನ್ನು ತಾತ್ಕಾಲಿಕವಾಗಿ ಅಮಾನತ್ತಿನಲ್ಲಿಡಲಾಗಿದೆ.

ಬಿಪಿಎಲ್​ಗೆ ಅನರ್ಹರು ಎಂದು ಕಂಡು ಬಂದಿರುವ ಕಾರ್ಡ್​ಗಳನ್ನು ಎಪಿಎಲ್​ಗೆ ಸೇರಿಸಲಾಗಿದೆ. ಬಿಪಿಎಲ್​ಗೆ ಅರ್ಹರಿದ್ದೂ ಕೂಡ ಎಪಿಎಲ್​ಗೆ ಸೇರಿಸಿದ್ದರೇ ಅಂಥವರಿಗೆ ಮರು ಹಂಚಿಕೆ ಮಾಡುತ್ತೇವೆ ಎಂದರು.

ಬಿಪಿಎಲ್​ಗೆ ಅರ್ಹರಿದ್ದವರ ಕಾರ್ಡ್ ರದ್ದಾಗಿದ್ದರೆ ಒಂದು ವಾರ ಕಾಲಾವಕಾಶ ನೀಡಿ, ಮರು ನೋಂದಣಿ ಮಾಡಿಕೊಂಡು ಕಾರ್ಡ್​ ಮರುಹಂಚಿಕೆ ಮಾಡುತ್ತೇವೆ ಎಂದು ತಿಳಿಸಿದರು.

ಬಿಪಿಎಲ್ ಕಾರ್ಡ್​ದಾರರನ್ನು ಎಪಿಎಲ್​ಗೆ ಸೇರ್ಪಡೆ ಮಾಡಿರುವ ವಿಚಾರವಾಗಿ ಮಾತನಾಡಿದ ಅವರು, ಇದರಲ್ಲಿ ಅಧಿಕಾರಿಗಳ ತಪ್ಪಿಲ್ಲ, ಎಲ್ಲ ಗೊಂದಲದ ಹೊಣೆ ನಾನೇ ಹೊರುವೆ. ಅಧಿಕಾರಿಗಳ ಜೊತೆ ಸಭೆ ನಡೆಸಿ ಸೂಕ್ತ ಸಲಹೆ ಸೂಚನೆ ನೀಡುವೆ. ಯಾವುದೇ ಅರ್ಹ ಬಿಪಿಎಲ್ ಕಾರ್ಡ್ ರದ್ದುಪಡಿಸುವುದಿಲ್ಲ ಎಂದು ಭರವಸೆ ನೀಡಿದರು.


Share It

You cannot copy content of this page