ಸಕಲೇಶಪುರ: ಬರಪೀಡಿತ ಜಿಲ್ಲೆಗಳಿಗೆ ಕುಡಿಯುವ ನಿರೋದಗಿಸುವ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಎತ್ತನಹೊಳೆ ಯೋಜನೆಯ ಮೊದಲ ಹಂತಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇಂದು ಸಕಲೇಶಪುರದ ಹೆಬ್ಬನಹಳ್ಳಿಯಲ್ಲಿ ಚಾಲನೆ ನೀಡಲಿದ್ದಾರೆ.
ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಪಶ್ಚಿಮ ಘಟ್ಟದ ಮೇಲ್ಭಾಗದಲ್ಲಿ ಹರಿಯುರುವ ಎತ್ತಿನಹೊಳೆ, ಕಾಡುಮನೆಹೊಳೆ, ಕೇರಿಹೊಳೆ ಮತ್ತು ಹೊಂಗದಹಳ್ಳದಿಂದ ರಾಜ್ಯದ ಬರಪೀಡಿತ ಜಿಲ್ಲೆಗಳಿಗೆ ನೀರೊದಗಿಸುವ ಯೋಜನೆ ಕಾಮಗಾರಿ 2014ರಲ್ಲಿ ಶುರುವಾಗಿತ್ತು. ಸುಮಾರು 8 ಸಾವಿರ ಕೋಟಿ ಅಂದಾಜು ವೆಚ್ಚದೊಂದಿಗೆ ಆರಂಭವಾದ ಈ ಯೋಜನೆಯ ಮೊದಲ ಹಂತ ಇದೀಗ ಉದ್ಘಾಟನೆಗೆ ಸಿದ್ಧವಾಗಿದೆ.
ಈ ಯೋಜನೆಗೆ ರಾಜ್ಯ ಸರ್ಕಾರ 23.251 ಕೋಟಿ ರೂ ವೆಚ್ಚ ಮಾಡಿದೆ. ಈ ಯೋಜನೆಯಡಿ 24.01ಟಿಎಂಸಿ ನೀರನ್ನು ಕುಡಿಯಲು ಹಾಗೂ ಕೆರೆಗಳನ್ನು ತುಂಬಿಸಲು ಬಳಸಲಾಗುತ್ತದೆ. ಬರ ಪೀಡಿತವಾದ 29ತಾಲೂಕುಗಳ 6,657 ಗ್ರಾಮಗಳ 75.59ಲಕ್ಷ ಜನರ ದಾಹ ತೀರಲಿದೆ. ಜೊತೆಗೆ 5ಜಿಲ್ಲೆಗಳ ಕೆರೆಗಳ ಅಂತರ್ಜಲ ಮರುಪೂರಣವೂ ನಡೆಯಲಿದೆ.