ಮಿರ್ಜಾಪುರ: ಉತ್ತರ ಪ್ರದೇಶದ ಮಿರ್ಜಾಪುರ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿ 10 ಮಂದಿ ಸಾವನ್ನಪ್ಪಿರುವ ಘಟನೆ ಶುಕ್ರವಾರ ಮುಂಜಾನೆ ನಡೆದಿದೆ.
ಕಾರ್ಮಿಕರನ್ನು ತುಂಬಿದ್ದ ಟ್ರ್ಯಾಕ್ಟರ್ ಟ್ರಾಲಿಗೆ ನಿಯಂತ್ರಣ ತಪ್ಪಿದ ಟ್ರಕ್ ಹಿಂಬದಿಯಿಂದ ಡಿಕ್ಕಿ ಹೊಡೆದಿದ ಪರಿಣಾಮ ಘಟನೆ ಸಂಭವಿಸಿದೆ.
ಅಪಘಾತದಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅಪಘಾತದ ನಂತರ ಪೊಲೀಸರು ಲ ಗಾಯಾಳುಗಳನ್ನು ಆಂಬ್ಯುಲೆನ್ಸ್‌ನಲ್ಲಿ ಆಸ್ಪತ್ರೆಗೆ ರವಾನಿಸಿದ್ದಾರೆ. ಮೃತಪಟ್ಟವರೆಲ್ಲರೂ ವಾರಾಣಸಿ ನಿವಾಸಿಗಳು ಎಂದು ತಿಳಿದುಬಂದಿದೆ.
ಗುರುವಾರ ರಾತ್ರಿ 1 ಗಂಟೆ ಸುಮಾರಿಗೆ ಮಿರ್ಜಾಪುರದ ಕಚ್ವಾನ್ ಪ್ರದೇಶದ ಕಟ್ಕಾ ಗ್ರಾಮದ ಬಳಿ ವಾರಾಣಸಿ – ಪ್ರಯಾಗರಾಜ್ ರಾಷ್ಟ್ರೀಯ ಹೆದ್ದಾರಿಯಲ್ಲಿ, ದುರ್ಘಟನೆ ಸಂಭವಿಸಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಅಭಿನಂದನ್ ತಿಳಿಸಿದ್ದಾರೆ.
ಅಪಘಾತದ ಬಳಿಕ ಲಾರಿ ಚಾಲಕ ವಾಹನ ಬಿಟ್ಟು ಓಡಿ ಪರಾರಿಯಾಗಿದ್ದಾನೆ. ಕಚವಾನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ಪ್ರಕರಣ ದಾಖಲಾಗಿದೆ.