ಬೆಂಗಳೂರು: ರಾಜ್ಯಾದ್ಯಂತ ಪ್ರತಿಭಟನೆ ನಡೆಸುತ್ತಿರುವ ಪ್ರಾಥಮಿಕ ಶಾಲಾ ಶಿಕ್ಷಕರ ಪ್ರತಿಭಟನೆಗೆ ಮಣಿದ ಸರಕಾರ, ಇಂದು ಸಭೆ ನಡೆಸಿ ಅವರ ಬೇಡಿಕೆಗಳ ಬಗ್ಗೆ ಚರ್ಚೆ ನಡೆಸಲಿದೆ.
ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಬೆಳಗ್ಗೆ 11 ಹಂಟೆಗೆ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಸಭೆ ಆಯೋಜನೆ ಮಾಡಲಾಗಿದೆ. ಸಭೆಯಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಮತ್ತು ಹಿರಿಯ ಅಧಿಕಾರಿಗಳು ಭಾಗವಹಿಸಲಿದ್ದಾರೆ.
ಪ್ರಾಥಮಿಕ ಶಾಲಾ ಶಿಕ್ಷಕರು ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ತಹಿಸಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಸರಕಾರ ಅವರ ಬೇಡಿಕೆಗಳ ಕುರಿತ ಚರ್ಚೆಗೆ ಮುಂದಾಗಿದೆ.