ಸುದ್ದಿ

31 ಶಿಕ್ಷಕರಿಗೆ ರಾಜ್ಯ ಪ್ರಶಸ್ತಿ; ಪಟ್ಟಿ ಬಿಡುಗಡೆ

Share It

ಬೆಂಗಳೂರು: ಸೆ. 5ರಂದು ನಡೆಯುವ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ನೀಡಲಾಗುವ ರಾಜ್ಯ ಮಟ್ಟದ ಶಿಕ್ಷಕರ ಪ್ರಶಸ್ತಿಗೆ ಪ್ರಾಥಮಿಕ ಶಾಲೆಗಳ 20 ಹಾಗೂ ಪ್ರೌಢಶಾಲೆಗಳ 11 ಶಿಕ್ಷಕರನ್ನು ಆಯ್ಕೆ ಮಾಡಲಾಗಿದೆ.
ರಾಜ್ಯ ಪ್ರಶಸ್ತಿಗೆ ಆಯ್ಕೆಯಾಗಿರುವವರ ಶಿಕ್ಷಕರ ಪಟ್ಟಿ ಬಿಡುಗಡೆಯಾಗಿದ್ದು ಶಿಕ್ಷಕರಿಗೆ ಕಾರ್ಯಕ್ರಮದಲ್ಲಿ 25 ಸಾವಿರ ನಗದು ನೀಡಿ, ಗೌರವಿಸಲಾಗುತ್ತದೆ.

ಶಿಕ್ಷಕರ ಪಟ್ಟಿ
ಕಲಬುರಗಿ ಜಿಲ್ಲೆ ಭೂಸಣಗಿಯ ಮಲ್ಲಿಕಾರ್ಜುನ ಎಸ್. ಸಿರಸಿಗಿ, ಚಿಕ್ಕೋಡಿ ಉಳ್ಳಾಗಡ್ಡಿವಾಡಿ ಶಾಲೆಯ ಪದ್ಮಶ್ರೀ ಸುರೇಶ, ಮೈಸೂರು ಜಿಲ್ಲೆ ಹಿನಕಲ್‌ನ ಕೆ.ಎಸ್. ಮಧುಸೂದನ್, ಬೆಳಗಾವಿ ಜಿಲ್ಲೆ ಅಂಬೇವಾಡಿಯ ಅಸ್ಮಾ ಇಸ್ಮಾಯಿಲ್, ದಕ್ಷಿಣ ಕನ್ನಡದ ನೀರ್ಕೆರೆ ಮೂಡಬಿದ್ರಿಯ ಕೆ. ಯಮುನಾ, ಹಾವೇರಿ ಜಿಲ್ಲೆಯ ಜಮೀರ್ ಅಬ್ದುಲ್, ದಾವಣಗೆರೆ ಜಿಲ್ಲೆ ಹಿಂಡಸಘಟ್ಟ ಕ್ಯಾಂಪ್‌ನ ಬಿ. ಅರುಣ್‌ಕುಮಾರ್, ಬೆಂಗಳೂರು ದಕ್ಷಿಣ ಜಿಲ್ಲೆಯ ಚಂದಾಪುರದ ಜಿ. ರಂಗನಾಥ, ಚಿಕ್ಕಬಳ್ಳಾಪುರ ಜಿಲ್ಲೆಯ ಇನಮಿಂಚೇನಹಳ್ಳಿಯ ಸುಶೀಲಮ್ಮ, ಮಧುಗಿರಿಯ ಬಸವನಹಳ್ಳಿಯ ಎಸ್.ವಿ. ರಮೇಶ್, ದೊಡ್ಡಬಳ್ಳಾಪುರದ ಬೀಡಿಕೆರೆಯ ಎಚ್.ಎಂ. ಮಂಗಳಕುಮಾರಿ, ಧಾರವಾಡ ಜಿಲ್ಲೆ ಹಳೇಹುಬ್ಬಳ್ಳಿಯ ಹನುಮಂತಪ್ಪ ಎಂ. ಕುಂದರಗಿ, ಚಿತ್ರದುರ್ಗ ಜಿಲ್ಲೆ ಹೊಸಹಟ್ಟಿಯ ಆರ್.ಟಿ. ಪರಮೇಶ್ವರಪ್ಪ, ಶಿವಮೊಗ್ಗ ಗುತ್ಯಪ್ಪ ಕಾಲೊನಿಯ ಎಂ. ಭಾಗೀರಥಿ, ವಿಜಯನಗರ ಜಿಲ್ಲೆ ಹಿರೇಕೊಳಚಿಯ ಎಲ್. ಮಧುನಾಯ್ಕ, ರಾಮನಗರ ಜಿಲ್ಲೆ ಅರಳಾಳುಸಂದ್ರದ ಪಿ. ಸುರೇಶ, ಯಾದಗಿರಿ ಜಿಲ್ಲೆ ಬಸ್ಸಾಪುರದ ನೀಲಪ್ಪ ಎಸ್. ತೆಗ್ಗಿ, ಉತ್ತರ ಕನ್ನಡ ಜಿಲ್ಲೆಯ ಹೊನ್ನೆಮಡಿಯ ರಾಘವೇಂದ್ರ ಎಸ್. ಮಡಿವಾಳ, ಗದಗ ಜಿಲ್ಲೆ ಬಸಾಪುರದ ರತ್ನಾಬಾಯಿ, ಶಿರಸಿ ಜೋಗೇಶ್ವರ ಹಳ್ಳದ ರಾಮಚಂದ್ರ ಶೇಷಾಜಪ್ಪ ಕಲಾಲ.

ಪ್ರೌಢಶಾಲಾ ಶಿಕ್ಷಕರು:
ಬೆಂಗಳೂರು ಉತ್ತರ ಜಿಲ್ಲೆಯ ನೆಲಗದರಹಳ್ಳಿಯ ಎಸ್. ಶ್ಯಾಮಲಾ, ಚಿಕ್ಕಮಗಳೂರು ಜಿಲ್ಲೆ ಲೋಕನಾಥಪುರದ ಆರ್.ಡಿ.ರವೀಂದ್ರ, ದಕ್ಷಿಣ ಕನ್ನಡದ ಗುರುವಾಯನಕೆರೆಯ ಚಿತ್ರಕಲಾ ಶಿಕ್ಷಕ ಕೆ. ವಿಶ್ವನಾಥ ಗೌಡ ಬೆಂಗಳೂರು ಗ್ರಾಮಾಂತರದ ಟಿ. ಬೇಗೂರಿನ ಟಿ.ಕೆ. ರವಿಕುಮಾರ್, ಉತ್ತರ ಕನ್ನಡ ಹಿರೇಗುತ್ತಿಯ ಮಹಾದೇವ ಬೊಮ್ಮಗೌಡ, ಶಿವಮೊಗ್ಗ ಜಿಲ್ಲೆ ಹೊಸೂರು ಗುಡ್ಡೆಕೇರಿಯ ಟಿ. ವೀರೇಶ, ಧಾರವಾಡ ಜಿಲ್ಲೆ ಇಂಗಳಹಳ್ಳಿಯ ಕಳಕ ಮಲ್ಲೇಶ ಪಟ್ಟಣಶೆಟ್ಟಿ,ಉಡುಪಿ ಜಿಲ್ಲೆ ರಂಜಾಳದ ವಿನಾಯಕ ನಾಯ್ಕ, ಬೆಂಗಳೂರು ದಕ್ಷಿಣ ಜಿಲ್ಲೆ ಕೋನಪ್ಪನ ಅಗ್ರಹಾರದ ಸಿ. ಪದ್ಮಾವತಿ, ವಿಜಯಪುರ ಜಿಲ್ಲೆ ನಾದ ಕೆ.ಡಿ.ಯ ಶಶಿಕಲಾ ಲಕ್ಷ್ಮಣ ಬಡಿಗೇರ, ಚಿಕ್ಕಬಳ್ಳಾಪುರ ಜಿಲ್ಲೆ ಹಂಪಸಂದ್ರದ ಹರೀಶ್ ರಾಜ ಅರಸ್ ರಾಜ್ಯ ಮಟ್ಟದ ಉತ್ತಮ ಶಿಕ್ಷಕರ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.


Share It

You cannot copy content of this page