ಬೆಂಗಳೂರು: ಬಿಬಿಎಂಪಿ ಕಸದ ಗುತ್ತಿಗೆದಾರನೊಬ್ಬನಿಗೆ ಜೀವ ಬೆದರಿಕೆ ಹಾಕಿದ್ದು ಮತ್ತು ಆತನ ಸಹಚರನ ಜಾತಿ ನಿಂದನೆ ಮಾಡಿದ ಆರೋಪದಲ್ಲಿ ರಾಜರಾಜೇಶ್ವರಿ ನಗರ ಶಾಸಕ ಮುನಿರತ್ನ ವಿರುದ್ಧ ಎಫ್ ಐಆರ್ ದಾಖಲಿಸಲಾಗಿದೆ.
ವೈಯ್ಯಾಲಿ ಕಾವಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಜೀವ ಬೆದರಿಕೆ ಪ್ರಕರಣದಲ್ಲಿ ಶಾಸಕ ಮುನಿರತ್ನ, ಆಪ್ತ ಸಹಾಯಕ ವಿಜಯ್ ಕುಮಾರ್, ಸೆಕ್ಯುರಿಟಿ ಅಭಿಷೇಕ್ ಹಾಗೂ ವಸಂತ್ ಕುಮಾರ್ ಎಂಬುವವರ ಮೇಲೆ ಪ್ರಕರಣ ದಾಖಲಾಗಿದೆ.
ಚೆಲುವರಾಜು ಎಂಬ ಬಿಬಿಎಂಪಿ ಕಸದ ಗುತ್ತಿಗೆದಾರ ಪೊಲೀಸ್ ಆಯುಕ್ತರಿಗೆ ನೀಡಿದ್ದ ದೂರನ್ನು ಆಧರಿಸಿ ಮುನಿರತ್ನ ವಿರುದ್ಧ ಎಫ್ ಐಆರ್ ಆಗಿದ್ದು, ಆತಮ ಜತೆ ಮಾತನಾಡುವಾಗ ಜಾತಿ ನಿಂದನೆ ಮಾಡಿರುವುದು ಕಂಡು ಬಂದಿದ್ದು, ಅದಕ್ಕೆ ಸಂಬಂಧಿಸಿದಂತೆ ಪ್ರತ್ಯೇಕ ಜಾತಿ ನಿಂದಮೆ ಪ್ರಕರಣ ದಾಖಲಿಸಲಾಗಿದೆ.
ಈ ನಡುವೆ ಮುನಿರತ್ನ ಮಾತನಾಡಿದ್ದಾರೆ ಎನ್ನಲಾದ ಆಡಿಯೋ ವೈರಲ್ ಆಗಿದ್ದು ಅದರಲ್ಲಿ ಒಕ್ಕಲಿಗ ಸಮುದಾದ ಮತ್ತು ಪರಿಶಿಷ್ಟ ಜಾತಿಗಳೆರೆಡನ್ನು ಗುರುಯಾಗಿಸಿ ಮುನಿರತ್ನ ಅವಾಚ್ಯ ಶಬ್ದ ಬಳಸಿದ್ದಾರೆ ಎಂದು ಆರೋಪಿಸಿ ದಲಿತ ಸಂಘಟನೆಗಳು ಪ್ರತಿಭಟನೆಗೆ ಸಜ್ಜಾಗಿವೆ.