ಅಪರಾಧ ರಾಜಕೀಯ ಸುದ್ದಿ

ನಾಗಮಂಗಲ ಗಲಭೆಯಲ್ಲಿ 2.66 ಕೋಟಿ ಮೌಲ್ಯದ ಆಸ್ತಿ ನಾಶ

Share It

ಮಂಡ್ಯ: ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದ ಗಲಭೆಯಿಂದ ಒಟ್ಟು 2.66 ಕೋಟಿ ಮೌಲ್ಯದ ಆಸ್ತಿ ನಾಶವಾಗಿದೆ ಎಂದು ಮಂಡ್ಯ ಜಿಲ್ಲಾಧಿಕಾರಿ ಡಾ. ಕುಮಾರ ತಿಳಿಸಿದ್ದಾರೆ.

ಹಾನಿಗೊಳಗಾದವರಿಗೆ ಪರಿಹಾರ ನೀಡುವ ನಿಟ್ಟಿನಲ್ಲಿ ಎಸಿ ನೇತೃತ್ವದಲ್ಲಿ ಏಳು ಅಧಿಕಾರಿಗಳ ತಂಡ ವರದಿ ಸಿದ್ದಪಡಿಸಿ ಸರ್ಕಾರಕ್ಕೆ ಸಲ್ಲಿಸಲಾಗಿದೆ ಎಂದು ತಿಳಿಸಿದ್ದಾರೆ.

ನಾಗಮಂಗಲ‌ ಪಟ್ಟಣದಲ್ಲಿ ಕೊಡಿಗೇಡಿಗಳು 26 ಅಂಗಡಿಗಳಿಗೆ ಬೆಂಕಿ ಹಚ್ಚಿದ್ದಾರೆ. 1 ಕೋಟಿ 47 ಲಕ್ಷ ಮೌಲ್ಯದ ಕಟ್ಟಡಗಳು ಸುಟ್ಟು ಭಸ್ಮವಾಗಿವೆ. 1 ಕೋಟಿ 18 ಲಕ್ಷ ಮೌಲ್ಯದ ಸರಕು ಬೆಂಕಿಗೆ ಸುಟ್ಟಿದೆ. ಹಾನಿಗೊಳಗಾದ ಸಂತ್ರಸ್ತರಿಗೆ ಸರ್ಕಾರ ಪರಿಹಾರ ನೀಡುವ ಭರವಸೆ ನೀಡಿದೆ.

ಗಲಭೆಯಲ್ಲಿ ಕಿಡಿಗೇಡಿಗಳು ಹಚ್ಚಿದ ಬೆಂಕಿ ಮತ್ತು ಪೆಟ್ರೋಲ್​ ಬಾಂಬ್​ನಿಂದ ಹಲವು ಅಂಗಡಿಗಳು, ಸರಕುಗಳು ಸುಟ್ಟು ಭಸ್ಮವಾಗಿವೆ. ಎಫ್​ಐಆರ್​ನಲ್ಲಿ 4.5 ಕೋಟಿಯಷ್ಟು ನಷ್ಟವಾಗಿದೆ ಎಂದು ಉಲ್ಲೇಖಿಸಲಾಗಿದೆ.


Share It

You cannot copy content of this page