ಸುದ್ದಿ

ಪ್ರತಿ ಮನೆ ಮೇಲೆ ಹಾರಲಿದೆ ಕನ್ನಡ ಬಾವುಟ: ರಾಜ್ಯೋತ್ಸವಕ್ಕೆ ರಾಜ್ಯ ಸರಕಾರದ ಅದ್ದೂರಿಯ ಸಿದ್ಧತೆ

Share It

ಬೆಂಗಳೂರು: ಕರ್ನಾಟಕ ಸುವರ್ಣ ಸಂಭ್ರಮ-50ರ ಸಮಾರೋಪ ಸಮಾರಂಭ ಅಂಗವಾಗಿ ಮನೆ ಮನೆಯಲ್ಲಿ ಕನ್ನಡದ ಬಾವುಟ ಹಾರಿಸಲು ಮನವಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯೋತ್ಸವ ಪ್ರಶಸ್ತಿ-2024 ಪ್ರದಾನ ಹಾಗೂ ಕರ್ನಾಟಕ ಸುವರ್ಣ ಸಂಭ್ರಮ-50 ಸಮಾರೋಪ ಸಮಾರಂಭದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.

ಕರ್ನಾಟಕ ಸುವರ್ಣ ಸಂಭ್ರಮ-50ರ ಸಮಾರೋಪ ಸಮಾರಂಭವನ್ನು ಕನ್ನಡ ಜನೋತ್ಸವವಾಗಿ ಆಚರಿಸಲು ನಿರ್ಧರಿಸಲಾಗಿದೆ. ಈ ವರ್ಷ ಕರ್ನಾಟಕ ಸರ್ಕಾರ 69 ಗಣ್ಯರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಲಿದೆ. ರಾಜ್ಯೋತ್ಸವ ಪ್ರಶಸ್ತಿಗೆ ಅರ್ಜಿ ಸಲ್ಲಿಸಲು ಸೆ.30 ಅಥವಾ ಅದಕ್ಕೂ ಮೊದಲು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದ್ದು, ಕನ್ನಡ ಮತ್ತು ಸಂಸ್ಕೃತಿ ಸಚಿವರು ಆಯ್ಕೆ ಸಮಿತಿಯ ಮುಖ್ಯಸ್ಥರಾಗಿರುತ್ತಾರೆ ಎಂದು ತಿಳಿಸಿದರು.

ಸಮಾರೋಪ ಸಮಾರಂಭ ವಿಧಾನ ಸೌಧದ ಮುಂಭಾಗ ನಡೆಯಲಿದ್ದು, ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಹ ಇದೇ ಸಂದರ್ಭದಲ್ಲಿ ಮಾಡಲಾಗುವುದು ಎಂದು ಹೇಳಿದರು.

ಕನ್ನಡ ಭಾಷೆ, ಸಂಸ್ಕೃತಿ, ಸಂಗೀತ, ಸಾಹಿತ್ಯ, ಜನಪದ, ಚರಿತ್ರೆ ಎಲ್ಲದರ ಮಹತ್ವ ಸಾರಲು ಸಿದ್ಧತೆ ನಡೆಸಲಾಗಿದೆ ಎಂದು ಹೇಳಿದರು. ಹಂಪಿಯಿಂದ ಆರಂಭವಾದ ಕನ್ನಡ ರಥ 28 ​​ಜಿಲ್ಲೆಗಳಲ್ಲಿ ಸಂಚರಿಸಿ, ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರದಲ್ಲಿ ಸಮಾರೋಪ ಆಗಲಿದೆ.


Share It

You cannot copy content of this page