ಬ್ರಿಮ್ಸ್ ಆಸ್ಪತ್ರೆಯಲ್ಲಿ ಆಮ್ಲಜನಕ ಪೂರೈಕೆಗೆ ಅಡ್ಡಿ: 40 ನವಜಾತ ಶಿಶುಗಳ ಪ್ರಾಣ ಉಳಿಸಿದ ಸಿಬ್ಬಂದಿ

Share It

ಬೀದರ್: ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಬೀದರ್ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಬ್ರಿಮ್ಸ್) ಯಲ್ಲಿ ಆಮ್ಲಜನಕ ಪೂರೈಕೆಗೆ ಅಡ್ಡಿಯಾಗಿ ಬುಧವಾರ ಸಮಸ್ಯೆ ಉಂಟಾಗಿತ್ತು.

ಆಮ್ಲಜನಕ ಪೂರೈಕೆ ಸ್ಥಗಿತಗೊಂಡ ತಕ್ಷಣವೇ ಆಸ್ಪತ್ರೆ ಸಿಬ್ಬಂದಿ ಶಿಶುಗಳನ್ನು ಇತರ ಆಸ್ಪತ್ರೆಗಳಿಗೆ ಸ್ಥಳಾಂತರಿಸುವ ಮೂಲಕ 40 ನವಜಾತ ಶಿಶುಗಳ ಜೀವ ಉಳಿಸಿದ್ದಾರೆ.

ರಾತ್ರಿ ಸುರಿದ ಭಾರೀ ಮಳೆಯಿಂದಾಗಿ ಬ್ರಿಮ್ಸ್ ಕಟ್ಟಡದ ನೆಲಮಾಳಿಗೆಯಲ್ಲಿರುವ ಜನರೇಟರ್ ಕೋಣೆಗೆ ನೀರು ನುಗ್ಗಿತ್ತು. ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಮೂರನೇ ಮಹಡಿಗೆ ಮತ್ತು ಆರನೇ ಮಹಡಿಯಲ್ಲಿನ ಎನ್‌ಐಸಿಯು ಘಟಕಕ್ಕೆ ವಿದ್ಯುತ್ ಸಂಪರ್ಕ ಕಡಿತಗೊಂಡಿತ್ತು.

ತಕ್ಷಣ ಎಚ್ಚೆತ್ತ ಸಿಬ್ಬಂದಿ ನವಜಾತ ಶಿಶುಗಳನ್ನು ಬೇರೆ ಆಸ್ಪತ್ರೆಗಳಿಗೆ ಸ್ಥಳಾಂತರಿಸಿದರು. ನರ್ಸಿಂಗ್ ಸಿಬ್ಬಂದಿ ಕೈ ಪಂಪ್ ಮೂಲಕ ಆಮ್ಲಜನಕ ಒದಗಿಸಿ ವೃದ್ಧೆಯೊಬ್ಬರ ಜೀವ ಉಳಿಸಿದ್ದಾರೆ.


Share It

You May Have Missed

You cannot copy content of this page