ಅಪರಾಧ ಸುದ್ದಿ

ಹಳೆ ಮನೆ ಕೆಡವುತ್ತಿದ್ದಾಗ ಅವಘಡ : ಇಬ್ಬರು ಸಾವು

Share It

ಮಂಗಳೂರು: ಜೆಸಿಬಿಯಿಂದ ಮನೆ ಕೆಡವುತ್ತಿದ್ದಾಗ ಅಲ್ಲಿಯೇ ಕೆಳಗೆ ನಿಂತು ನೋಡುತ್ತಿದ್ದ ಸಂದರ್ಭದಲ್ಲಿ ಕಾಂಕ್ರೀಟ್ ಬೀಮ್ ಕುಸಿದು ಬಿದ್ದು ಇಬ್ಬರು ಮೃತಪಟ್ಟ ಘಟನೆ ಮಂಗಳೂರಿನಲ್ಲಿ ಗುರುವಾರ ನಡೆದಿದೆ.
ಮನೆ ಮಾಲೀಕ ಅಡ್ವಿನ್ ಹೆರಾಲ್ಡ್ ಮಾಬೇನ್ (54) ಮತ್ತು ಪಕ್ಕದ ಮನೆಯ ಜೇಮ್ಸ್ ಜತ್ತಣ್ಣ (56) ಮೃತಪಟ್ಟವರು.
ಗಂಭೀರ ಗಾಯಗೊಂಡ ಇವರನ್ನು ಆಸ್ಪತ್ರೆಗೆ ದಾಖಲಿಸುವಷ್ಟರಲ್ಲಿ ಮೃತಪಟ್ಟಿದ್ದಾರೆ. ಕದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಮನೆಯ ಮಾಲಿಕ ಸೇರಿದಂತೆ ಇಬ್ಬರು ಕರಂಗಲ್ಪಾಡಿಯ ಸಿ.ಜೆ. ಕಾಮತ್ ರಸ್ತೆಯ ಮಿಷನ್ ಕಾಂಪೌಂಡ್ ನಲ್ಲಿ ಹಳೆ ಮನೆಯನ್ನು ಜೆಸಿಬಿಯಿಂದ ಕೆಡವುತ್ತಿದ್ದ ಸಂದರ್ಭದಲ್ಲಿ ಈ ದುರ್ಘಟನೆ ನಡೆದಿದೆ.

ಜೇಮ್ಸ್ ಅವರು ಹಳೆ ಮನೆಯನ್ನು ಕೆಡವಿ ಹೊಸ ಮನೆ ನಿರ್ಮಿಸುವ ಉದ್ದೇಶದಿಂದ ಬಹರೈನ್ ನಿಂದ ಬಂದಿದ್ದರು. ಅಡ್ವಿನ್ ಪಕ್ಕದ ಮನೆಯವರಾಗಿದ್ದು ಸೋದರ ಸಂಬಂಧಿಯಾಗಿದ್ದರು.


Share It

You cannot copy content of this page