ಬೆಂಗಳೂರು : ಸಿಎಂ ಸಿದ್ದರಾಮಯ್ಯ ಅವರ ಮುಡ ಹಗರಣ ಮತ್ತೆ ಮುನ್ನೆಲೆಗೆ ಬಂದಿದ್ದು. ಹೆಚ್ಚಿನ ತನಿಖೆ ನಡೆಸಲು ಆದೇಶ ಬಂದಿದೆ. ಪ್ರಕರಣಕ್ಕೆ ಸಂಬಂಧ ಪಟ್ಟ ಒಟ್ಟು 300 ಕೋಟಿ ಮೌಲ್ಯದ ಆಸ್ತಿಯನ್ನು
ಜಾರಿ ನಿರ್ದೇಶನಾಲಯ ಮುಟ್ಟುಗೋಲು ಹಾಕಿಕೊಂಡಿದೆ.ಈ ಬಗ್ಗೆ ಜಾರಿ ನಿರ್ದೇಶನಾಲಯ ಟ್ವೀಟ್ ಮಾಡಿದೆ.
ಮಾಹಿತಿಯ ಪ್ರಕಾರ ಒಟ್ಟು 142 ಸ್ಥಿರಾಸ್ತಿ ಗಳನ್ನು ಮುಟ್ಟುಗೋಲು ಹಾಕಿಕೊಳ್ಳಾಗಿದೆ. ಮುಟ್ಟುಗೋಲು ಹಾಕಿಕೊಂಡಿರುವ ಆಸ್ತಿಯ ಒಟ್ಟು ಮೌಲ್ಯ ಸುಮಾರು 300 ಕೋಟಿಯಾಗಿದೆ.
ಸ್ನೇಹಮಯ ಕೃಷ್ಣ ಸೇರಿದಂತೆ ಹಲವರ ವಿರುದ್ಧ ಪ್ರಕರಣಗಳು ದಾಖಲಾಗಿದ್ದವು. ನಿವೇಶನದ ಹಂಚಿಕೆಯಲ್ಲಿ ಏಜೆಂಟರ್ ಹಾಗೂ ರಿಯಲ್ ಎಸ್ಟೇಟ್ ಉದ್ಯಮಿಗಳು ಭಾಗಿಯಾಗಿರುವುದು ಸಾಬೀತಾಗಿದೆ. ಈಗ ಆಸ್ತಿಯನ್ನು ದೂರಿನ ಆಧಾರದ ಮೇಲೆ ಮುಟ್ಟುಗೋಲು ಹಾಕಿಕೊಂಡಿದೆ. ಸದ್ಯ ಮುಟ್ಟುಗೋಲು ಹಾಕಿಕೊಂಡಿರುವ ಆಸ್ತಿಯನ್ನು ವಿವಿಧ ಏಜೆಂಟರ್ ಹಾಗೂ ಉದ್ಯಮಿಗಳ ಹೆಸರಿನಲ್ಲಿದೆ ಎಂದು ಇಡಿ ಪ್ರಕಟಣೆಯಲ್ಲಿ ತಿಳಿಸಿದೆ.
ಸದ್ಯ ಸಿಎಂ ಹಾಗೂ ಇತರರ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಯುತ್ತಿದೆ. ಅದರಲ್ಲಿ ಸಿಎಂ ತಮ್ಮ ಅಧಿಕಾರವನ್ನು ಬಳಸಿ 3 ಎಕರೆ 16 ಗುಂಟೆಯ ಬದಲಿಗೆ ಪಾರ್ವತಮ್ಮ ಅವರ ಹೆಸರಿನಲ್ಲಿ ಇರುವ 14 ನಿವೇಶನಗಳನ್ನು ಪರಿಹಾರವಾಗಿ ಪಡೆಯಲು ಹೇಳಿದ್ದಾರೆ ಆರೋಪಿಸಲಾಗಿದೆ.